×
Ad

ಹಾಸನ | ವೇಶ್ಯಾವಾಟಿಕೆ ಆರೋಪ: ಲಾಡ್ಜ್ ನಿಂದ ಮೂವರು ವಿದೇಶಿ ಮಹಿಳೆಯರ ರಕ್ಷಣೆ

ಓರ್ವ ಪೊಲೀಸ್ ವಶಕ್ಕೆ

Update: 2026-03-05 11:15 IST

ಹಾಸನ, ಮಾ,5: ವಿದೇಶಿ ಮಹಿಳೆಯರನ್ನು ಬಳಸಿಕೊಂಡು ವೇಶ್ಯಾವಾಟಿಕೆ ನಡೆಸಲಾಗುತ್ತಿದೆ ಎಂಬ ಆರೋಪದಲ್ಲಿ ನಗರದ ಹೊರವಲಯದಲ್ಲಿರುವ ಲಾಡ್ಜ್ ಒಂದರ ಮೇಲೆ ಪೊಲೀಸರು ದಾಳಿ ನಡೆಸಿ ಮೂವರು ಮಹಿಳೆಯರನ್ನು ರಕ್ಷಿಸಿದ್ದು, ಈ ಸಂಬಂಧ ಓರ್ವನನ್ನು ವಶಕ್ಕೆ ಪಡೆದಿದ್ದಾರೆ.

ನಗರದ ಬೂವನಹಳ್ಳಿ ಸಮೀಪ ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿರುವ ‘ಕರಾವಳಿ ಕಂಫರ್ಟ್’ಲಾಡ್ಜ್ ನಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತಿವೆ ಎಂಬ ಖಚಿತ ಮಾಹಿತಿ ಬಡಾವಣೆ ಪೊಲೀಸ್ ಠಾಣೆಗೆ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಬಡಾವಣೆ ಠಾಣೆ ಪೊಲೀಸರು ಹಾಗೂ ‘ಒಡನಾಡಿ’ಸಂಸ್ಥೆಯ ಕಾರ್ಯಕರ್ತರು ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ.

ದಾಳಿಯ ವೇಳೆ ಲಾಡ್ಜ್ ನಲ್ಲಿದ್ದ ಮೂವರು ಮಹಿಳೆಯರನ್ನು ಪೊಲೀಸರು ರಕ್ಷಿಸಿದ್ದಾರೆ. ಅವರನ್ನು ವಿದೇಶದಿಂದ ಕರೆತರಲಾಗಿದ್ದು, ಅಕ್ರಮ ದಂಧೆಗೆ ಬಳಸಲಾಗುತ್ತಿತ್ತು ಎಂಬ ಆರೋಪ ಕೇಳಿಬಂದಿದೆ.

ಈ ಪ್ರಕರಣದಲ್ಲಿ ಭಾಗಿಯಾಗಿದ್ದ ಓರ್ವನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇನ್ನೂ ಕೆಲ ಪುರುಷರು ದಾಳಿಯ ವೇಳೆ ಸ್ಥಳದಿಂದ ಪರಾರಿಯಾಗಿದ್ದು, ಅವರನ್ನು ಪತ್ತೆಹಚ್ಚಲು ಪೊಲೀಸರು ಮುಂದಾಗಿದ್ದಾರೆ.

ಈ ಸಂಬಂಧ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News