×
Ad

ಹಾಸನ: ರಸ್ತೆ ಅಪಘಾತ; ಬೈಕ್‌ ಸವಾರ ಮೃತ್ಯು

Update: 2024-03-23 10:03 IST

ಹಾಸನ: ಮಾ,23: ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದ ಬೈಕ್ ಸವಾರನ ಮೇಲೆ ಹಿಂದಿನಿಂದ ಬಂದ ವಾಹನಗಳು ಹರಿದ ಪರಿಣಾಮ ಆತ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ಚನ್ನರಾಯಪಟ್ಟಣ ಬೈಪಾಸ್ ನಲ್ಲಿ ಶುಕ್ರವಾರ ರಾತ್ರಿ ನಡೆದಿದೆ.

ಮೃತ ಯುವಕನನ್ನು ನಗರದ ಗೌರಿ ಕೊಪ್ಪಲಿನ ರಾಕೇಶ್ (27) ಎಂದು ಗುರುತಿಸಲಾಗಿದೆ. ಬೆಂಗಳೂರಿನಲ್ಲಿ ಉದ್ಯೋಗಿಯಾಗಿದ್ದ ಈತ ತನ್ನ ಕೆಟಿಎಂ ಬೈಕ್ ನಲ್ಲಿ ಬರುತ್ತಿದ್ದ ವೇಳೆ ಘಟನೆ ನಡೆದಿದೆ.  ಬೈಕ್ ಅತಿ ವೇಗವಾಗಿದ್ದ ಕಾರಣ ಅಪಘಾತವುಂಟಾಗಿದೆ ಎನ್ನಲಾಗಿದೆ.

 ಹಿಂದಿನಿಂದ ವೇಗವಾಗಿ ಬರುತ್ತಿದ್ದ ಮೂರ್ನಾಲ್ಕು ವಾಹನಗಳು ನಿಯಂತ್ರಣ ಸಾಧ್ಯವಾಗದೆ ಆತನ ಮೇಲೆ ಹರಿದಿದ್ದು,  ಇದರಿಂದ ಸ್ಥಳದಲ್ಲೇ ಆತ ಪ್ರಾಣ ಕಳೆದುಕೊಂಡಿದ್ದಾನೆ. ಕಾರೊಂದು ದೇಹದ ಮೇಲೆ ಹತ್ತುವುದನ್ನು ತಪ್ಪಿಸಲು ಯತ್ನಿಸಿ ಡಿವೈಡರ್ ಗೆ ಢಿಕ್ಕಿ ಹೊಡೆದಿದೆ. ಕಾರಿನ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಆದರೆ ರಾಕೇಶ್ ಮೇಲೆ ಹರಿದ ಇತರ ವಾಹನಗಳೆಲ್ಲವೂ ನಿಲ್ಲಿಸದೆ ಪರಾರಿಯಾಗಿವೆ ಎಂದು ತಿಳಿದು ಬಂದಿದೆ.

ಚನ್ನರಾಯಪಟ್ಟಣ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News