×
Ad

ಹಾಸನ | ಕಾಡಾನೆ ದಾಳಿಯಿಂದ ಮೂವರು ಕಾರ್ಮಿಕರಿಗೆ ಗಾಯ

Update: 2024-04-13 18:50 IST

ಸಾಂದರ್ಭಿಕ ಚಿತ್ರ 

ಅರೇಹಳ್ಳಿ: ಕಾಡಾನೆ ದಾಳಿ ಮಾಡಿದ ಪರಿಣಾಮ ಮೂವರು ಕಾರ್ಮಿಕರು ಗಾಯಗೊಂಡ ಘಟನೆ ಬೇಲೂರು ತಾಲೂಕಿನ ಅರೇಹಳ್ಳಿಯ ಬಾಳಗುಲಿಯಲ್ಲಿ ಶನಿವಾರ ಬೆಳಗ್ಗೆ ವರದಿಯಾಗಿದೆ.

ಸೌದೆ ಮಾಡಲು ಗಣೇಶ್ ಹಾಗೂ ಧರ್ಮೋಧರ ಎಂಬ ಕಾರ್ಮಿಕರು ಬಾಳಗುಲಿ ಎಂಬಲ್ಲಿಗೆ ತೆರಳಿ ಸೌದೆಯನ್ನು ಯಂತ್ರದ ಮೂಲಕ ತುಂಡರಿಸುತ್ತಿದ್ದ ವೇಳೆ ಕಾಡಾನೆ ಏಕಾಏಕಿ ದಾಳಿ ಮಾಡಿದೆ. ಇಬ್ಬರ ಮೇಲೆ ದಾಳಿ ಮಾಡಿದ ಬಳಿಕ ಅನತಿ ದೂರದಲ್ಲಿರುವ ತೋಟವೊಂದರಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕ ಮಹಿಳೆ ಪರಮೇಶ್ವರಿಯ ಮೇಲೆಯೂ ಸಹ ದಾಳಿ ನಡೆಸಿದೆ ಎನ್ನಲಾಗಿದೆ.

ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಸ್ಥಳೀಯರು ಹಾಗೂ ಬೇಲೂರು, ಸಕಲೇಶಪುರ ಆನೆ ಕಾರ್ಯಪಡೆ ಸಿಬ್ಬಂದಿಗಳು ಗಾಯಗೊಂಡವರಿಗೆ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಹಾಸನ ಜಿಲ್ಲಾಸ್ಪತ್ರೆಗೆ ಕಳುಹಿಸಿಕೊಟ್ಟಿದ್ದಾರೆ ಎಂದು ತಿಳಿದುಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News