×
Ad

ಹಾಸನ ದುರಂತ | ಟ್ರಕ್ ಚಾಲಕ ಭುವನ್ ವಿರುದ್ಧ ಪ್ರಕರಣ ದಾಖಲು

Update: 2025-09-13 12:10 IST

ಹಾಸನ : ಹಾಸನ ಗಣಪತಿ ಮೆರವಣಿಗೆಯಲ್ಲಿ ಟ್ರಕ್ ಹರಿದು ಸಂಭವಿಸಿದ ದುರಂತದಲ್ಲಿ ಮೃತಪಟ್ಟವರಿಗೆ ತಲಾ 5 ಲಕ್ಷ ರೂ. ಹಾಗೂ ಗಾಯಾಳುಗಳಿಗೆ ತಲಾ 50,000 ಪರಿಹಾರ ಘೋಷಿಸಲಾಗಿದೆ ಎಂದು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಭೈರೇಗೌಡ ಅವರು ತಿಳಿಸಿದ್ದಾರೆ.

ದುರಂತಕ್ಕೆ ಕಾರಣನಾದ ಟ್ರಕ್ ಚಾಲಕ ಭುವನ್ ವಿರುದ್ಧ ಗೋರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಸ್ಥಳಕ್ಕೆ ಹೆಚ್ಚುವರಿ ಕೆಎಸ್‌ಆರ್‌ಪಿ ತುಕಡಿ ನೇಮಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಹಾಸನ ಗಣಪತಿ ಮೆರವಣಿಗೆಯಲ್ಲಿ ಸಂಭವಿಸಿದ ದುರಂತ ಹಾಗೂ ಮುಂದೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ, ಹಾಸನ ಜಿಲ್ಲೆ ಸಂಸದರಾದ ಶ್ರೇಯಸ್ ಪಟೇಲ್ ಹಾಗೂ ಜಿಲ್ಲಾಧಿಕಾರಿ ಲತಾ ಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮುಹಮ್ಮದ್ ಸುಜಿತಾ ಜೊತೆ ಚರ್ಚೆ ನಡೆಸಿದರು.

ಘಟನೆ ವಿವರ : 

ಶುಕ್ರವಾರ ಹಾಸನದ ಮೊಸಳೆ ಹೊಸಹಳ್ಳಿ ಗ್ರಾಮದಲ್ಲಿ ಗಣಪತಿ ಮೆರವಣಿಗೆ ವೇಳೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ 9 ಮಂದಿ ಮೃತಪಟ್ಟು, ಘಟನೆಯಲ್ಲಿ ಸುಮಾರು 23ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದರು.

ಹಾಸನದಿಂದ ಮೈಸೂರಿನ ಕಡೆಗೆ ಸಂಚರಿಸುತ್ತಿದ್ದ ಟ್ರಕ್ ವೊಂದು ಓವರ್‌ಟೇಕ್ ಮಾಡುವ ರಭಸದಲ್ಲಿ ರಸ್ತೆಯ ಡಿವೈಡರ್‌ಗೆ ಢಿಕ್ಕಿ ಹೊಡೆದು ನಿಯಂತ್ರಣವನ್ನು ಕಳೆದುಕೊಂಡಿದೆ. ನಂತರ ಮೆರವಣಿಗೆಯಲ್ಲಿ ಭಾಗವಹಿಸುತ್ತಿದ್ದ ಗುಂಪಿನ ಮೇಲೆ ನೇರವಾಗಿ ಹರಿದ ಪರಿಣಾಮ ದುರ್ಘಟನೆ ಸಂಭವಿಸಿತ್ತು.

 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News