ಹಾಸನ : ಜಿಲ್ಲೆಯ ಬೇಲೂರು ತಾಲೂಕಿನ ಕಿರಗಡಲು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕಾಲಿಗೆ ಗಾಯವಾಗಿದ್ದರಿಂದ ಮುಂದೆ ಸಾಗಲಾರದೆ ಜಿಂಕೆಯೊಂದು ಒದ್ದಾಡುತ್ತಿರುವುದನ್ನು ಕಂಡ ಬೂವನಹಳ್ಳಿ ಹಾಗೂ ಶೆಟ್ಟಿಹಳ್ಳಿ ಗ್ರಾಮದ ಯುವಕರು ತಕ್ಷಣ ನೆರವಿಗೆ ಧಾವಿಸಿದ್ದಾರೆ.

ಜಿಂಕೆಯನ್ನು ಸುರಕ್ಷಿತವಾಗಿ ರಕ್ಷಿಸಿ ಗ್ರಾಮಕ್ಕೆ ಹೊತ್ತು ತಂದ ಯುವಕರು, ಚೀಕನಹಳ್ಳಿ ಗ್ರಾಮದಿಂದ ಪಶುವೈದ್ಯರನ್ನು ಕರೆಸಿ ಚಿಕಿತ್ಸೆ ಕೊಡಿಸಿದ್ದಾರೆ.

ನಂತರ ಜಿಂಕೆಯನ್ನು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಒಪ್ಪಿಸುವ ಮೂಲಕ ಯುವಕರು ಮಾನವೀಯತೆ ಮೆರೆದಿದ್ದಾರೆ. ಯುವಕರ ಈ ಕಾರ್ಯಕ್ಕೆ ಗ್ರಾಮಸ್ಥರಿಂದ ಮೆಚ್ಚುಗೆ ವ್ಯಕ್ತವಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor