×
Ad

ಬಾನು ಮುಷ್ತಾಕ್ ʼದಸರಾ ಉದ್ಘಾಟನೆʼ ಒಳ್ಳೆಯ ವಿಚಾರ : ಎಚ್.ಡಿ.ರೇವಣ್ಣ

Update: 2025-08-25 16:32 IST

ಹಾಸನ : ಅಂತರಾಷ್ಟ್ರೀಯ ʼಬೂಕರ್ ಪ್ರಶಸ್ತಿʼ ವಿಜೇತರಾದ ಬಾನು ಮುಷ್ತಾಕ್ ಅವರು ದಸರಾ ಉದ್ಘಾಟನೆ ಮಾಡುತ್ತಿರುವುದು ಉತ್ತಮ ಬೆಳವಣಿಗೆ ಮತ್ತು ಸ್ವಾಗತಾರ್ಹ ಎಂದು ಜೆಡಿಎಸ್‌ ಶಾಸಕ ಎಚ್.ಡಿ.ರೇವಣ್ಣ ಹೇಳಿದ್ದಾರೆ.

ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರ ಪ್ರಶ್ನೆಗೆ ಉತ್ತರಿಸಿದ ಅವರು, ಹಿರಿಯ ಸಾಹಿತಿ ಬಾನು ಮುಷ್ತಾಕ್ ಅವರು ಹೋರಾಟಗಾರ್ತಿ. ಇವರು ನಾಡಹಬ್ಬ ದಸರಾ ಉದ್ಘಾಟನೆ ಮಾಡುತ್ತಿರುವುದು ಒಳ್ಳೆಯ ವಿಚಾರ. ಇದರಲ್ಲಿ ರಾಜಕಾರಣ ಅಥವಾ ಧರ್ಮ ಬೆರಸುವುದು ಸರಿಯಲ್ಲ ಎಂದು ಹೇಳಿದರು.

ನಮ್ಮದು ಜಾತ್ಯತೀತ ರಾಷ್ಟ್ರ ಎಲ್ಲರಿಗೂ ಅವಕಾಶವಿದೆ. ಹಾಸನ ಜಿಲ್ಲೆಯ ಮಹಿಳೆಗೆ ಅವಕಾಶ ಸಿಕ್ಕಿದೆ. ಇದನ್ನು ನಾನು ಸ್ವಾಗತಿಸುತ್ತೇನೆ ಎಂದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News