×
Ad

ಸಕಲೇಶಪುರ: ರೈಲ್ವೆ ಹಳಿ ಮೇಲೆ ಮತ್ತೆ ಮಣ್ಣು ಕುಸಿತ; ಮಂಗಳೂರು- ಹಾಸನ ರೈಲು ಸಂಚಾರ ಸ್ಥಗಿತ

Update: 2024-08-10 10:44 IST

ಸಕಲೇಶಪುರ: ಮರಗಳ ಸಮೇತ ರೈಲ್ವೆ ಹಳಿಗಳ ಮೇಲೆ ಮತ್ತೆ ಮಣ್ಣು ಕುಸಿದಿರುವ ಪರಿಣಾಮ ರೈಲು ಸಂಚಾರ ಸ್ಥಗಿತವಾಗಿರುವ ಘಟನೆ ತಾಲೂಕಿನ ಬಾಳ್ಳುಪೇಟೆ ಸಮೀಪ ಕಿಲೋಮೀಟರ್ ಸಂಖ್ಯೆ 42/43 ರ ಮಧ್ಯೆ ನಡೆದಿದೆ.

ಶುಕ್ರವಾರ (ಆಗಸ್ಟ್ 9) ಮಧ್ಯರಾತ್ರಿ ಈ ಘಟನೆ ನಡೆದಿದ್ದು,  ಇದರಿಂದ ಹಾಸನ-ಮಂಗಳೂರು ಮಾರ್ಗದ ರೈಲುಗಳ ಸಂಚಾರ ಸ್ಥಗಿತವಾಗಿದೆ.

ಸಕಲೇಶಪುರ, ಯಡಕುಮಾರಿ, ಶಿರವಾಗಿಲು, ಆಲೂರು ಸೇರಿ ಆರು ಕಡೆ ಆರು ರೈಲುಗಳು ನಿಂತಿವೆ. ದಿಢೀರ್ ರೈಲುಗಳು ಸ್ಥಗಿತಗೊಂಡಿದ್ದರಿಂದ ಪ್ರಯಾಣಿಕರು ಪರದಾಡುವಂತಾಯಿತು. ರೈಲುಗಳಲ್ಲಿ ಸಾವಿರಾರು ಪ್ರಯಾಣಿಕರು ಇದ್ದು ಪರ್ಯಾಯ ವಾಹನ ವ್ಯವಸ್ಥೆ ಮಾಡಲಾಗುತ್ತಿದೆ. ಮಣ್ಣು ತೆರವು ಕಾರ್ಯಾಚರಣೆ ಮುಂದುವರಿದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News