×
Ad

ಹಾಸನ : ಆಹಾರ ನೀರಿಕ್ಷಕರ ನಿವಾಸ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

Update: 2024-01-31 17:05 IST

ಹಾಸನ: ಆದಾಯಕ್ಕಿಂತ ಹೆಚ್ಚು ಆಸ್ತಿಗಳಿಕೆ ಆರೋಪದ ದೂರು ಬಂದ ಹಿನ್ನಲೆಯಲ್ಲಿ ಆಹಾರ ನೀರಿಕ್ಷಕರ ನಿವಾಸ ಹಾಗೂ ಕಚೇರಿ ಮೇಲೆ ಲೋಕಾಯುಕ್ತರು ದಾಳಿ ನಡೆಸಿ ಪರಿಶೀಲನೆ ನಡೆಸಿ ಮಹತ್ವದ ದಾಖಲೆ ವಶಪಡಿಸಿಕೊಂಡಿದ್ದಾರೆ.

ಮೊದಲು ಆಹಾರ ನೀರಿಕ್ಷಕ ಜಗನ್ನಾಥ್ ವಾಸವಾಗಿರುವ ರಿಂಗ್ ರಸ್ತೆ ಬಳಿ ಇರುವ ನಿವಾಸದ ಮೇಲೆ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ಆತ ಕೆಲಸ ನಿರ್ವಹಿಸುವ ಕಚೇರಿ ಹಾಗೂ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ. ನಂತರ ಜಗನ್ನಾಥ್ ಸಹೋದರ ರಿಯಲ್ ಎಸ್ಟೇಟ್ ಉದ್ಯಮಿ ಕಿರಣ್ ನಿವಾಸ ಹಾಗೂ ಕಚೇರಿ ಮೇಲೂ ದಾಳಿ ನಡೆಸಿ ಕೆಲ ಗಂಟೆಗಳ ಕಾಲ ದಾಖಲೆ ಪರಿಶೀಲನೆ ಮಾಡಿದ್ದಾರೆ. ಲೋಕಾಯುಕ್ತ ಎಸ್ಪಿ ಮಲ್ಲಿಕ್ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ ತಿರುಮಲೇಶ್, ಇನ್ಸ್‌ಪೆಕ್ಟರ್‌ಗಳಾದ ಬಾಲು, ಶಿಲ್ಪಾ ನೇತೃತ್ವದಲ್ಲಿ ಆಸ್ತಿ ಪರಿಶೀಲಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News