×
Ad

ಹಾಸನ | ರೈಲ್ವೆ ಹಳಿ ಮೇಲೆ ಬಾಲಕನ ಮೃತದೇಹ ಪತ್ತೆ: ಕೊಲೆ ಶಂಕೆ

Update: 2024-07-11 11:49 IST

ಹಾಸನ : ನಗರದ ಹೊರ ವಲಯ ಬಸವನಹಳ್ಳಿ ಬಳಿಯ ರೈಲ್ವೆ ಹಳಿ ಮೇಲೆ ಬಾಲಕನ ಮೃತದೇಹ ಪತ್ತೆಯಾಗಿರುವುದು ವರದಿಯಾಗಿದೆ.

ಮೃತ ಬಾಲಕನನ್ನು ಚಿಕ್ಕಹೊನ್ನೇನಹಳ್ಳಿ ಗ್ರಾಮದ ನಿವಾಸಿಗಳಾದ ವೆಂಕಟೇಶ್ ಹಾಗೂ ರೂಪಾ ದಂಪತಿ ಪುತ್ರ ಕುಶಾಲ್ ಗೌಡ(12) ಎಂದು ಗುರುತಿಸಲಾಗಿದೆ. ಮಂಗಳವಾರ ಶಾಲೆ ಮುಗಿಸಿ ಬಂದ ಬಳಿಕ ಕಣ್ಣಮುಚ್ಚಾಲೆ ಆಡುತ್ತಿದ್ದ ವೇಳೆ ಬಚ್ಚಿಟ್ಟುಕೊಳ್ಳಲು ಹೋದ ಬಾಲಕ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದ ಎನ್ನಲಾಗಿದೆ. ಗ್ರಾಮಸ್ಥರು ಹಾಗೂ ಕುಟುಂಬಸ್ಥರು ಬಾಲಕನ ಪತ್ತೆಗೆ ಹುಡುಕಾಟ ನಡೆಸಿದರೂ ಬಾಲಕನ ಸುಳಿವು ಸಿಕ್ಕಿರಲಿಲ್ಲ. ಬುಧವಾರ ಮಧ್ಯಾಹ್ನ ಬಾಲಕನ ಮೃತದೇಹ ರೈಲ್ವೆ ಹಳಿ ಪತ್ತೆಯಾಗಿದೆ.

ವಿಷಯ ತಿಳಿದ ಹಾಸನ ಗ್ರಾಮಾಂತರ ಪೊಲೀಸ್ ಅಧಿಕಾರಿಗಳು ಹಾಗೂ ಎಫ್‌ಎಸ್ ಎಲ್‌ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಾಲಕನನ್ನು ಕೊಲೆ ಮಾಡಿ ರೈಲ್ವೆ ಹಳಿ ಬಳಿ ಹಾಕಿದ್ದಾರೆ ಎಂದು ಶಂಕೆ ವ್ಯಕ್ತಪಡಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News