×
Ad

ಸಕಲೇಶಪುರ | ಶಾಸಕ ಪೊನ್ನಣ್ಣ ಆಪ್ತ ಸಹಾಯಕನ ಪತ್ನಿ ಆತ್ಮಹತ್ಯೆ

Update: 2025-05-24 23:55 IST

ಸಕಲೇಶಪುರ : ಶಾಸಕ ಪೊನ್ನಣ್ಣ ಅವರ ಆಪ್ತ ಸಹಾಯಕ ಹಾಗೂ ಮಾಜಿ ಸಚಿವ ಎಚ್.ಕೆ.ಕುಮಾರಸ್ವಾಮಿ ಅವರ ಮಾಜಿ ಆಪ್ತ ಸಹಾಯಕ ಮಹೇಂದ್ರ ಅವರ ಪತ್ನಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಟ್ಟಣದ ಪಿಡಬ್ಲ್ಯೂಡಿ ಕ್ವಾಟರ್ಸ್‌ನಲ್ಲಿ ನಡೆದಿರುವುದು ವರದಿಯಾಗಿದೆ.

ಆತ್ಮಹತ್ಯೆ ಮಾಡಿಕೊಂಡವರನ್ನು ಶೃತಿ (35)ಎಂದು ಗುರುತಿಸಲಾಗಿದೆ.

ತಾಲೂಕಿನ ಕಲ್ಗಣೆ ಗ್ರಾಮದ ಸರಕಾರಿ ಶಾಲೆಯಲ್ಲಿ ಶಿಕ್ಷಕಿಯಾಗಿರುವ ಅವರು ಕೆಲ ತಿಂಗಳುಗಳಿಂದ ಮಾನಸಿಕ ಖಿನ್ನತೆ ಒಳಗಾಗಿದ್ದರು ಎನ್ನಲಾಗಿದೆ. ಶನಿವಾರ ಮನೆಯಲ್ಲಿ ವಿಷ ಸೇವಿಸಿ ತೀವ್ರ ಅಸ್ವಸ್ಥಗೊಂಡಿದ್ದ ಅವರನ್ನು ಚಿಕಿತ್ಸೆಗಾಗಿ ಹಾಸನದ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆಯೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಸಕಲೇಶಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಬರೆದಿಟ್ಟಿರುವ ಶ್ರುತಿ ನಾನು ಕೆಲವು ದಿನಗಳಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದೇನೆ. ನನ್ನ ಪತಿ ನನ್ನನ್ನು ಚೆನ್ನಾಗಿ ನೋಡಿಕೊಂಡಿದ್ದಾರೆ. ನನ್ನ ಮಕ್ಕಳನ್ನು ಚೆನ್ನಾಗಿ ಓದಿಸಿ ಎಂದು ಬರೆದಿದ್ದಾರೆ ಎಂದು ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News