×
Ad

ಉಪಚುನಾವಣೆಯಲ್ಲಿ ಸೋತ ಬಿಜೆಪಿಯಿಂದ 'ವಕ್ಫ್ ಹೋರಾಟ' ಎಂಬ ರಾಜಕೀಯ ನಾಟಕ ಆರಂಭ: ಸಿದ್ದರಾಮಯ್ಯ

Update: 2024-12-05 14:56 IST

ಹಾಸನ, ಡಿ.5: ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಸೋಲುಂಡಿರುವ ಬಿಜೆಪಿಯವರು 'ವಕ್ಫ್ ಹೋರಾಟ' ಎಂಬ ರಾಜಕೀಯ ನಾಟಕ ಪ್ರಾರಂಭಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಅವರು ಇಂದು ಭುವನಹಳ್ಳಿ ಗ್ರಾಮ ಹೆಲಿಪ್ಯಾಡ್ ಆವರಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.

ಬಿಜೆಪಿಯವರ ರಾಜಕೀಯ ಇಬ್ಬಂದಿತನ

ಬಿಜೆಪಿಯವರ ವಕ್ಫ್ ಹೋರಾಟ ಎರಡನೇ ದಿನಕ್ಕೆ ಕಾಲಿಟ್ಟಿರುವ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ,, ಬಿಜೆಪಿಯವರು ರಾಜಕೀಯಕ್ಕಾಗಿ ಹೋರಾಟ ಕೈಗೊಂಡಿದ್ದಾರೆ. 2014ರಲ್ಲಿ ಬಿಜೆಪಿಯವರು ತಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ವಕ್ಫ್ ಆಸ್ತಿಗಳನ್ನು ತೆರವುಗೊಳಿಸಿ ಕೊಡುವ ಭರವಸೆಯನ್ನು ನೀಡಿ, ಬಸವರಾಜ ಬೊಮ್ಮಾಯಿಯವರು ಮುಖ್ಯಮಂತ್ರಿಯಾಗಿದ್ದಾಗ, ಅತಿಕ್ರಮಣ ಮಾಡಿಕೊಂಡಿರುವವರಿಗೆ ನೋಟಿಸ್ ಗಳನ್ನೂ ನೀಡಿದ್ದರು. ಬಿಜೆಪಿಯವರು ರಾಜಕೀಯ ಇಬ್ಬದಿ ನೀತಿಯನ್ನು ಅನುಸರಿಸುತ್ತಿದ್ದಾರೆ ಎಂದು ಟೀಕಿಸಿದರು.

ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ಹೈಕೋರ್ಟ್ ವಿಭಾಗೀಯ ಪೀಠ ವಿಚಾರಣೆಯನ್ನು ಜನವರಿ 25ಕ್ಕೆ ನಿಗದಿಗೊಂಡಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಈ ಬಗ್ಗೆ ಕಾನೂನು ತಜ್ಞರೊಂದಿಗೆ ಮಾಹಿತಿ ಪಡೆದು ಚರ್ಚಿಸುತ್ತೇನೆ ಎಂದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News