×
Ad

ಸಕಲೇಶಪುರ: ಪ್ರೀತಿಯ ಹೆಸರಲ್ಲಿ ಯುವತಿಯರಿಗೆ ವಂಚನೆ; ಆರೋಪಿಯ ಬಂಧನ

Update: 2023-12-02 00:10 IST

Photo: freepik

ಸಕಲೇಶಪುರ: ಪ್ರೀತಿಯ ಹೆಸರಲ್ಲಿ ಯುವತಿಯರನ್ನು ಲೈಂಗಿಕವಾಗಿ ಬಳಸಿ ವಂಚಿಸಿದ್ದ ಮಾತ್ರವಲ್ಲದೇ, ಯುವತಿಯೊಬ್ಬಳನ್ನು ಕೋಣೆಯಲ್ಲಿ ಕೂಡಿ ಹಾಕಿ ಚಿತ್ರ ಹಿಂಸೆ ನೀಡಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಶರತ್ (24) ಬಂಧಿತ ವ್ಯಕ್ತಿಯಾಗಿದ್ದು, ಇಬ್ಬರು ಯುವತಿಯರು ಪೊಲೀಸರಿಗೆ ದೂರು ನೀಡಿದ ಹಿನ್ನೆಲೆ ಆತನನ್ನು ಸಕಲೇಶಪುರ ಪೊಲೀಸರು ಬಂಧಿಸಿದ್ದಾರೆ.

ಮೂರು ವರ್ಷದಿಂದ ಪ್ರೀತಿಸುವ ನಾಟಕವಾಡಿ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿ ಯುವತಿಯರು ತನ್ನ ಪ್ರೀತಿಯಲ್ಲಿ  ಬಿದ್ದ ಬಳಿಕ ಹಣ, ಒಡವೆ ಪಡೆದು ವಂಚಿಸುತ್ತಿದ್ದ ಎಂದು ದೂರಿನಲ್ಲಿ ಹೇಳಲಾಗಿದೆ



Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News