×
Ad

ಸಕಲೇಶಪುರ | ಕಾಡಾನೆ ದಾಳಿ: ರೈತನಿಗೆ ಗಂಭೀರ ಗಾಯ

Update: 2024-07-31 13:39 IST

ಸಾಂದರ್ಭಿಕ ಚಿತ್ರ

ಹಾಸನ, ಜು.31: ತೋಟಕ್ಕೆ ತೆರಳುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ ನಡೆಸಿ ಗಾಯಗೊಳಿಸಿದ ಘಟನೆ ಸಕಲೇಶಪುರ ತಾಲ್ಲೂಕಿನ, ಬಿರಡರಹಳ್ಳಿ ಗ್ರಾಮದಲ್ಲಿ ನಡೆದಿದೆ.

ಕೃಷ್ಣಗೌಡ (43) ಎಂಬವರು ಕಾಡಾನೆ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದು, ಸಕಲೇಶಪುರ ತಾಲೂಕು ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಕರೆತರಲಾಗಿದೆ.

ಮಳೆ ಬಿಡುವು ನೀಡಿದ ಹಿನ್ನೆಲೆಯಲ್ಲಿ ಪತ್ನಿ ಜತೆಗೆ ಕಾಫಿ ತೋಟಕ್ಕೆ ತೆರಳುತ್ತಿದ್ದ ಕೃಷ್ಣಗೌಡರ ಮೇಲೆ ಏಕಾಏಕಿ ಕಾಡಾನೆ ದಾಳಿ ಮಾಡಿದೆ ಎಂದು ತಿಳಿದುಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News