×
Ad

ಸಕಲೇಶಪುರ | ಸಿಲಿಂಡರ್ ನಿಂದ ಗ್ಯಾಸ್ ಸೋರಿಕೆ: ತಪ್ಪಿದ ದುರಂತ

Update: 2024-04-11 15:25 IST

ಸಕಲೇಶಪುರ, ಎ.11: ಮನೆಯೊಂದರಲ್ಲಿ ಅಡುಗೆ ಗ್ಯಾಸ್ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಕಾಣಿಸಿಕೊಂಡ ಘಟನೆ ನಗರದ ಮಲ್ಲಿಕಾರ್ಜುನ ನಗರದ ಅಕ್ರಮ್ ಎನ್ನುವವರ ಮನೆಯಲ್ಲಿ ನಡೆದಿದೆ. ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿ ಸಂಭಾವ್ಯ ಅವಘಡವನ್ನು ತಪ್ಪಿಸಿದರು.

ಅಡುಗೆ ಮಾಡುವ ವೇಳೆ ಸಣ್ಣದಾಗಿ ಗ್ಯಾಸ್ ಸೋರಿಕೆ ಆಗುತ್ತಿದ್ದೂ ಕ್ಷಣಾರ್ಧದಲ್ಲಿ ಬೆಂಕಿ ಹತ್ತಿಕೊಂಡು ಆತಂಕದ ವಾತಾವರಣ ನಿರ್ಮಾಣ ಆಗಿತ್ತು. ತಕ್ಷಣವೇ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಕರೆ ಮಾಡಿದ್ದರಿಂದ ಸ್ಥಳಕ್ಕೆ ಆಗಮಿಸಿದ ಸಿಬ್ಬಂದಿ ಬೆಂಕಿಯನ್ನು ನಂದಿಸಿ ಗ್ಯಾಸ್ ಸೋರಿಕೆಯನ್ನು ನಿಲ್ಲಿಸಿದರು.

 

 

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News