Sakleshpura | ಲಾಡ್ಜ್‌ನಲ್ಲಿ ಯುವತಿ ಅನುಮಾನಾಸ್ಪದ ಸಾವು
ಸಕಲೇಶಪುರ : ತಾಲೂಕಿನ ಹೆತ್ತೂರು ಹೋಬಳಿ ವಳಲಹಳ್ಳಿ ಕೂಡಿಗೆ ಸಮೀಪದ ಲಾಡ್ಜ್‌ನಲ್ಲಿ ಯುವತಿಯೊಬ್ಬಳು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಡೆದಿದೆ.
ಬೆಂಗಳೂರು ಮೂಲದ ವರ್ಷ (23) ಮೃತರು ಎಂದು ತಿಳಿದು ಬಂದಿದೆ.
ಮಾಹಿತಿ ಪ್ರಕಾರ, ಸೆ.11ರಂದು ಯುವತಿ ಇಬ್ಬರು ಸ್ನೇಹಿತರೊಂದಿಗೆ ಲಾಡ್ಜ್‌ಗೆ ಬಂದಿದ್ದರು ಎನ್ನಲಾಗಿದೆ. ಬಳಿಕ ಲಾಡ್ಜ್‌ನಲ್ಲೇ ಯುವತಿ ಮೃತಪಟ್ಟಿರುವುದು ಹಲವು ಪ್ರಶ್ನೆಗಳಿಗೆ ಕಾರಣವಾಗಿದೆ. ಸಾವಿಗೆ ನಿಖರ ಕಾರಣವೇನು ಎಂಬುದು ಪೊಲೀಸ್ ತನಿಖೆಯಿಂದ ತಿಳಿದುಬರಬೇಕಿದೆ.
ಘಟನೆಗೆ ಸಂಬಂಧಿಸಿದಂತೆ ಲಾಡ್ಜ್‌ಗೆ ಭೇಟಿ ನೀಡಿರುವ ಡಿವೈಎಸ್ಪಿ ಮಾಲತೀಶ್ ಹಾಗೂ ಗ್ರಾಮಾಂತರ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ, ಲಾಡ್ಜ್‌ನಲ್ಲಿ ನಡೆದಿರುವ ಘಟನೆ ಕುರಿತು ಮಾಹಿತಿ ಕಲೆಹಾಕುತ್ತಿದ್ದಾರೆ.
ಯುವತಿಯೊಂದಿಗೆ ಬಂದಿದ್ದರು ಎನ್ನಲಾಗಿರುವ ಇಬ್ಬರು ಸದ್ಯ ಎಲ್ಲಿದ್ದಾರೆ ಎಂಬ ಬಗ್ಗೆಯೂ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ.
ಯುವತಿಯ ಮೃತದೇಹವನ್ನು ಸಕಲೇಶಪುರದ ಕ್ರಾಫರ್ಡ್ ಸಾರ್ವಜನಿಕ ಆಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.