×
Ad

ಸಕಲೇಶಪುರ: ರಾಷ್ಟ್ರೀಯ ಹೆದ್ದಾರಿಯಲ್ಲಿ ಮೀನು ಸಾಗಾಟದ ಲಾರಿ ಪಲ್ಟಿ

Update: 2025-05-25 13:40 IST

ಹಾಸನ, ಮೇ 25: ಮೀನು ಸಾಗಾಟದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಉರುಳಿಬಿದ್ದ ಘಟನೆ ಸಕಲೇಶಪುರ ತಾಲೂಕಿನ ರಾಟೆ ಮನೆ ಬಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಇಂದು ಸಂಭವಿಸಿದೆ.

ಮಂಗಳೂರಿನಿಂದ ಬೆಂಗಳೂರಿಗೆ ಮೀನು ಸಾಗಿಸುತ್ತಿದ್ದ ಈ ಲಾರಿ ಭಾರೀ ಮಳೆಯ ಕಾರಣ ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದಿದೆ. ಲಾರಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News