×
Ad

ಸಕಲೇಶಪುರ | ಭಾರೀ ಮಳೆ; ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್ ಮರ!

Update: 2025-08-16 22:42 IST

ಸಕಲೇಶಪುರ : ಜಿಲ್ಲೆಯ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯ ಹಿನ್ನಲೆ ಸಕಲೇಶಪುರ ತಾಲ್ಲೂಕಿನ ಮಾರನಹಳ್ಳಿ ಸಮೀಪ ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್ ಗಾತ್ರದ ಮರ ಬಿದ್ದಿದ್ದು, ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ 

ಘಟನೆ ನಡೆದ ತಕ್ಷಣವೇ ಪೊಲೀಸರು ಅವರನ್ನು ರಕ್ಷಿಸಿ, ಬದಲಿ ವಾಹನದಲ್ಲಿ ಸುರಕ್ಷಿತವಾಗಿ ಕಳುಹಿಸಿದ್ದಾರೆ.

ಮರ ರಸ್ತೆಗೆ ಅಡ್ಡಲಾಗಿ ಬಿದ್ದಿರುವುದರಿಂದ ಸಂಚಾರ ಅಸ್ತವ್ಯಸ್ತಗೊಂಡಿದೆ. ಮಳೆಯ ನಡುವೆಯೇ ರಕ್ಷಣಾ ಸಿಬ್ಬಂದಿ ಮರ ತೆರವುಗೊಳಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ.

ಸ್ಥಳದಲ್ಲೇ ಮೊಕ್ಕಾಂ ಹೂಡಿರುವ ಪೊಲೀಸರು ಸಂಚಾರ ನಿಯಂತ್ರಣಕ್ಕೆ ಹರಸಾಹಸ ಪಡುತ್ತಿದ್ದಾರೆ. ಈ ಘಟನೆ ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News