ಸಕಲೇಶಪುರ | ಬೈಕಿಗೆ ಲಾರಿ ಢಿಕ್ಕಿ: ಇಬ್ಬರು ಸ್ಥಳದಲ್ಲೇ ಮೃತ್ಯು
Update: 2025-02-27 11:23 IST
ಸಕಲೇಶಪುರ: ಫೆ,26: ಬೈಕಿಗೆ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಂ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಪಟ್ಟಣದ ಹೊಸ ಬಸ್ ನಿಲ್ದಾಣದ ಸಮೀಪ ಬುಧವಾರ ರಾತ್ರಿ ನಡೆದಿದೆ.
ತಾಲೂಕಿನ ವಳಲಹಳ್ಳಿ ಗ್ರಾಮದ ನಿವಾಸಿ ಆಕಾಶ್(22) ಮತ್ತು ಶಂಕರ(45) ಮೃತಪಟ್ಟವರು.
ಇವರಿಬ್ಬರು ಕಳೆದ ರಾತ್ರಿ ಜಾತ್ರಾ ಮಹೋತ್ಸವ ಮುಗಿಸಿಕೊಂಡು ಬೈಕಿನಲ್ಲಿ ಹಿಂದಿರುಗುತ್ತಿದ್ದ ವೇಳೆ ಪಟ್ಟಣದ ಹೊಸ ಬಸ್ ನಿಲ್ದಾಣದ ಸಮೀಪ ಬೈಕಿಗೆ ಲಾರಿ ಢಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.
ಈ ಬಗ್ಗೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.