×
Ad

ಸಕಲೇಶಪುರ | ನಡು ರಸ್ತೆಯಲ್ಲಿ ಹೊತ್ತಿ ಉರಿದ ಖಾಸಗಿ ಬಸ್: ಪ್ರಯಾಣಕರು ಪಾರು

Update: 2025-01-02 12:29 IST

ಸಕಲೇಶಪುರ: ಜ.2: ಚಲಿಸುತ್ತಿದ್ದ ಖಾಸಗಿ ಬಸ್ಸೊಂದರಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಘಟನೆ ಸಕಲೇಶಪುರ ತಾಲೂಕಿನ, ಶಿರಾಡಿಘಾಟ್ ರಸ್ತೆಯ, ಎತ್ತಿನಹಳ್ಳ ಬಳಿ ಗುರುವಾರ ಮುಂಜಾನೆ ಸಂಭವಿಸಿದೆ. ಈ ವೇಳೆ ಚಾಲಕ ತೋರಿದ ಸಮಯ ಪ್ರಜ್ಞೆ ಬಸ್ಸಿನಲ್ಲಿದ್ದ ಪ್ರಯಾಣಿಕರನ್ನು ಅಪಾಯದಿಂದ ಪಾರು ಮಾಡಿದೆ.

ಬೆಂಗಳೂರಿನಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಕುಕ್ಕೆ ಶ್ರೀ ಹೆಸರಿನ ಸ್ಲೀಪಿಂಗ್ ಕೋಚ್ ಎಸಿ ಬಸ್ ಸುಮಾರು ಮೂವತ್ತು ಪ್ರಯಾಣಿಕರನ್ನು ಹೊತ್ತು ಸಾಗುತ್ತಿತ್ತು. ಶಿರಾಡಿ ಘಾಟ್ ರಸ್ತೆಯಲ್ಲಿ ತೆರಳುತ್ತಿದ್ದ ವೇಳೆ ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣವೇ ಬಸ್ ನಿಲ್ಲಿಸಿ ಪ್ರಯಾಣಿಕರನ್ನು ಕೆಳಗಿಸಿದ ಚಾಲಕ ಯೋಗೀಶ್ ಎಲ್ಲರ ಪ್ರಾಣ ಉಳಿಸಿದ್ದಾರೆ.

ನೋಡ ನೋಡುತ್ತಿದ್ದಂತೆ ಬಸ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ತೆರಳಿ ಬೆಂಕಿ ನಂದಿಸುವ ಪ್ರಯತ್ನ ಮಾಡಿದರು. ಅಷ್ಟರಲ್ಲಿ ಬಸ್ ಸಂಪೂರ್ಣ ಸುಟ್ಟು ಹೋಗಿತ್ತು. ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಎಲ್ಲರನ್ನೂ ಬದಲಿ ಬಸ್ಸುಗಳಲ್ಲಿ ಕಳುಹಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News