×
Ad

ಚನ್ನಪಟ್ಟಣದಲ್ಲಿ ನಿಖಿಲ್ ಕುಮಾರಸ್ವಾಮಿ ಪರ ಪ್ರಚಾರಕ್ಕೆ ಹೋಗುವ ಬಗ್ಗೆ ಇನ್ನೂ ತೀರ್ಮಾನ ಮಾಡಿಲ್ಲ: ಜಿ.ಟಿ.ದೇವೇಗೌಡ

Update: 2024-10-29 13:18 IST

ಹಾಸನ: ಮೈಸೂರಿನಲ್ಲಿ ತುಂಬಾ ಬ್ಯುಸಿಯಾಗಿದ್ದೇನೆ, ಹಾಗಾಗಿ ನಾನು ಯಾವುದೇ ಚುನಾವಣೆಗೆ ಹೋಗಿಲ್ಲ. ಚನ್ನಪಟ್ಟಣ ಚುನಾವಣೆ ಬಗ್ಗೆ ಮಾಹಿತಿ ಗೊತ್ತಿಲ್ಲ ಎಂದು ಮಾಜಿ ಸಚಿವ, ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ಹೇಳಿದರು.

ಕುಟುಂಬ ಸಮೇತರಾಗಿ ಆಗಮಿಸಿಹಾಸನಾಂಬೆ ದೇವಿ ದರ್ಶನ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣದಲ್ಲಿ ನಿಖಿಲ್ ಕುಮಾರಸ್ವಾಮಿ ಪರ ಪ್ರಚಾರಕ್ಕೆ ಹೋಗುವ ಬಗ್ಗೆ ಇನ್ನೂ ತೀರ್ಮಾನ ಮಾಡಿಲ್ಲ. ನನಗೆ ಯಾವುದೇ ಆಹ್ವಾನ ಬಂದಿಲ್ಲ. ನಾನು ತೀರ್ಮಾನಗಳನ್ನು ಮಾಡಿಲ್ಲ ಎಂದರು. ಯಾವುದೇ

ಕ್ಷೇತ್ರದಲ್ಲಿ ಕೆಲಸಗಳ ಒತ್ತಡದಲ್ಲಿ ಇದ್ದೇನೆ. ಮುಂದೆ ನೋಡೋಣ. ಚನ್ನಪಟ್ಟಣ ಚುನಾವಣೆ ಬಗ್ಗೆ ಮಾಹಿತಿ ಪಡೆದಿಲ್ಲ, ಅದರ ಬಗ್ಗೆ ನಾನು ಮಾತನಾಡಲ್ಲ. ಒಳ್ಳೆಯದಾಗಲಿ ಎಂದು ಹಾರೈಸುತ್ತೇನೆ ಎನ್ನುತ್ತಾ ನಗುತ್ತಲೇ ದೇವಾಲಯದಿಂದ ತೆರಳಿದರು.

Full View


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News