×
Ad

ಹಾಸನ: ಕೆರೆಯಲ್ಲಿ ಮುಳುಗಿ ಒಂದೇ ಕುಟುಂಬದ ಮೂವರು ಮಕ್ಕಳು ಮೃತ್ಯು

Update: 2024-05-31 18:07 IST

ಸಾಂದರ್ಭಿಕ ಚಿತ್ರ 

ಹಾಸನ: ಇತ್ತೀಚೆಗಷ್ಟೇ ಕೆರೆಯಲ್ಲಿ ಈಜಲು ತೆರಳಿದ್ದ ನಾಲ್ವರು ಮಕ್ಕಳು ನೀರುಪಾಲಾಗಿದ್ದ  ಘಟನೆ ಮಾಸುವ ಮುನ್ನವೇ ಇದೀಗ ಮತ್ತೊಂದು ದುರಂತ ಸಂಭವಿಸಿದೆ. ಕೆರೆಯಲ್ಲಿ ಈಜಲು ತೆರಳಿದ್ದ ಒಂದೇ ಕುಟುಂಬದ ಮೂವರು ಮಕ್ಕಳು ಸಾವನ್ನಪ್ಪಿದ ಘಟನೆ ಬೇಲೂರು ತಾಲೂಕಿನ ನರಸೀಪುರ ಗ್ರಾಮದಲ್ಲಿ ನಡೆದಿದೆ.

ನಿತ್ಯಾ(12), ದೀಕ್ಷಾ(10), ಕುಸುಮಾ(6) ಮೃತಪಟ್ಟವರು.

ಜಾನುವಾರುಗಳನ್ನು ಕೆರೆಯ ಬಳಿ ಕಟ್ಟಿ ಆಡವಾಡುತ್ತಿದ್ದಾಗ ಮೂರು ಮಕ್ಕಳಲ್ಲಿ ಒಬ್ಬ ಬಾಲಕಿ ಆಕಸ್ಮಿಕವಾಗಿ ಮುಳುಗಿದ್ದು ಆಕೆಯನ್ನು ರಕ್ಷಿಸುವ ಪ್ರಯತ್ನದಲ್ಲಿ ಮಿಕ್ಕಿಬ್ಬರೂ ಮುಳುಗಿದ್ದಾರೆ.

ಸ್ಥಳಕ್ಕೆ ಹಳೇಬೀಡು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News