ಹಾಸನದಲ್ಲಿ ಹೃದಯಾಘಾತದಿಂದ ಮೂವರು ಮೃತ್ಯು
ಸಾಂದರ್ಭಿಕ ಚಿತ್ರ | PC : freepik
ಹಾಸನ : ಜಿಲ್ಲೆಯಲ್ಲಿ ಹೃದಯಾಘಾತದ ಸರಣಿ ಮುಂದುವರೆದಿದ್ದು, ಸೋಮವಾರ ಮೂವರು ಮೃತಪಟ್ಟಿದ್ದಾರೆ.
ಸಕಲೇಶಪುರ ತಾಲೂಕಿನ ಬೆಳಗೋಡು ಹೋಬಳಿ ಮೆಣಸಿನಮಕ್ಕಿ ಗ್ರಾಮದಲ್ಲಿ ಲಕ್ಷ್ಮಣ್ (52), ಹಾಸನ ನಗರದ ಅಮೀರ್ ಮೊಹಲ್ಲಾ ವಾಸಿ ಮೋಹಿತ್ (53), ಅರಸೀಕೆರೆ ತಾಲೂಕಿನ ಬೆಳಗುಂಬ ಗ್ರಾಮದಲ್ಲಿ ಸುರೇಶ್ (52 ) ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಸಕಲೇಶಪುರ ತಾಲೂಕಿನ ಬೆಳಗೋಡು ಹೋಬಳಿ ಮೆಣಸಿನಮಕ್ಕಿ ಗ್ರಾಮದಲ್ಲಿ ಲಕ್ಷ್ಮಣ್ (52) ಮನೆಗೆ ಬಂದಾಗ ಎದೆ ನೋವು ಕಾಣಿಸಿಕೊಂಡಿದ್ದು, ಕುಟುಂಬಸ್ಥರು ಕೂಡಲೇ ಆಂಬುಲೆನ್ಸ್ ಗೆ ಕರೆ ಮಾಡಿದ್ದಾರೆ. ವಾಹನವು ಮನೆಯ ಬಳಿ ಬರುವಷ್ಟರಲ್ಲಿ ಲಕ್ಷ್ಮಣ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಹಾಸನ ನಗರದ ಅಮೀರ್ ಮೊಹಲ್ಲಾ ವಾಸಿ ಮೋಹಿತ್ (53) ಹೃದಯಾಘಾತದಿಂದ ಸಾವನಪ್ಪಿದ್ದು, ಮೋಹಿತ್ ಮನೆಯಲಿದ್ದ ವೇಳೆ ಎದೆ ನೋವು ಕಾಣಿಸಿಕೊಂಡಿದೆ. ನಂತರ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗ ಮಧ್ಯದಲ್ಲಿ ಎದೆನೋವು ಹೆಚ್ಚಾಗಿ ಮೋಹಿತ್ ಕೊನೆಯುಸಿರೆಳೆದಿದ್ದಾರೆ.
ಅರಸೀಕೆರೆ ತಾಲೂಕಿನ ಬೆಳಗುಂಬ ಗ್ರಾಮದಲ್ಲಿ ಸುರೇಶ್ (52)ಸಾವಿಗೀಡಾಗಿದ್ದು, ಇಂದು ಮುಂಜಾನೆ 5 ಗಂಟೆಗೆ ಸುರೇಶ್ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು, ಅರಸೀಕೆರೆ ತಾಲೂಕು ಆಸ್ಪತ್ರೆಗೆ ಸಂಬಂಧಿಕರು ಕರೆ ತರುವ ವೇಳೆಗಾಗಲೇ ಸಾವಿಗೀಡಾಗಿದ್ದಾರೆ.