×
Ad

ಹಾಸನ| ರಸ್ತೆ ಬದಿ ನಿಂತಿದ್ದ ಟ್ರಕ್‌ಗೆ ಬೈಕ್ ಢಿಕ್ಕಿ; ಇಬ್ಬರು ಮೃತ್ಯು

Update: 2024-04-01 00:04 IST

ಹಾಸನ: ರಸ್ತೆ ಬದಿ ನಿಂತಿದ್ದ ಟ್ರಕ್‌ಗೆ ಹಿಂಬದಿಯಿಂದ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲೂಕಿನ, ಶಾಂತಿಗ್ರಾಮ ಟೋಲ್ ಬಳಿ ನಡೆದಿದೆ.

ಅರಕಲಗೂಡು ತಾಲೂಕಿನ ಚಿಕ್ಕ ಆಲದಹಳ್ಳಿ ಗ್ರಾಮದ ಆಶ್ವತ್ಥ್ (42) ಹಾಗೂ ಆಲದಹಳ್ಳಿ ಗ್ರಾಮದ ಸಾಗರ್ (42) ಮೃತಪಟ್ಟವರು.

ಶಾಂತಿಗ್ರಾಮ ಟೋಲ್ ಬಳಿ ರಸ್ತೆ ಬದಿ ಟ್ರಕ್ ನಿಲ್ಲಿಸಿ, ಚಾಲಕ ಹಾಗೂ ನಿರ್ವಾಹಕ ಅಡುಗೆ ಮಾಡುತ್ತಿದ್ದ ಸಂದರ್ಭದಲ್ಲಿ ಚನ್ನರಾಯಪಟ್ಟಣದ ಕಡೆಯಿಂದ ಹಾಸನದ ಕಡೆಗೆ ಬರುತ್ತಿದ್ದ ಬೈಕ್ ಸವಾರರು ಹಿಂದಿನಿಂದ ಬಂದು ಟ್ರಕ್‌ಗೆ ಢಿಕ್ಕಿ ಹೊಡೆದಿದ್ದಾರೆ. ಢಿಕ್ಕಿಯ ರಭಸಕ್ಕೆ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News