×
Ad

ಉಡುಪಿ: ಕಡಲ್ಕೊರೆತ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ

Update: 2024-07-21 11:28 IST

ಉಡುಪಿ: ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ರವಿವಾರ ಉಡುಪಿಯ ಪಡು ತೋಣ್ಸೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಗುಜ್ಜರಬೆಟ್ಟು (ಹೂಡೆ) ಕಡಲ ಕೊರತದಿಂದ ಹಾನಿಗೊಳಗಾದ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದರು.

ಮಳೆಯಿಂದ ಆಗಿರುವ ನಷ್ಟದ ಬಗ್ಗೆ ವರದಿ ನೀಡುವಂತೆ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ವೇಳೆ ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ಅರುಣ್, ಜಿಲ್ಲಾ ಪಂಚಾಯತ್ ಸಿಇಒ ಪ್ರತೀಕ್ ಬಯಲ್, ಕುಂದಾಪುರ ವಿಭಾಗದ ಸಹಾಯಕ ಆಯುಕ್ತರಾದ ಎಸ್. ಆರ್. ರಶ್ಮಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.


Delete Edit


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News