ಸಕಲೇಶಪುರ | ಯುವತಿಯನ್ನು ಅಡ್ಡಗಟ್ಟಿ ಹಲ್ಲೆ ಆರೋಪ : ಅರಣ್ಯ ಇಲಾಖೆ ಸಿಬ್ಬಂದಿಯ ಬಂಧನ
Update: 2024-03-05 15:40 IST
ಸಕಲೇಶಪುರ: ಕಾರಿನಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಯುವತಿಯೋರ್ವಳನ್ನು ಅಡ್ಡಗಟ್ಟಿ ಹಲ್ಲೆ ಮಾಡಿದ ಆರೋಪದ ಮೇಲೆ ಅರಣ್ಯ ಇಲಾಖೆ ಅರ್.ಆರ್.ಟಿ ಸಿಬ್ಬಂದಿ ಮದನ್ ಎಂಬಾತನನ್ನು ಬಂಧಿಸಿರುವ ಬಗ್ಗೆ ವರದಿಯಾಗಿದೆ.
ಆರೋಪಿ ಮದನ್ ಆಗಾಗ್ಗೆ ಮೊಬೈಲ್ ಗೆ ಕಾಲ್ ಮಾಡಿ ಪೀಡಿಸುತ್ತಿದ್ದರಿಂದ ಕೋಪಗೊಂಡ ಯುವತಿ, ಆತನ ನಂಬರನ್ನು ಬ್ಲಾಕ್ ಮಾಡಿದ್ದಳು ಎನ್ನಲಾಗಿದೆ.
ಇದರಿಂದ ಹತಾಶನಾದ ಮದನ್, ಯುವತಿ ಕಾರಿನಲ್ಲಿ ಸಕಲೇಶಪುರಕ್ಕೆ ತೆರಳುತ್ತಿದ್ದ ವೇಳೆ ತನ್ನ ಮನೆಯ ಮುಂದೆ ಕಾರು ಅಡ್ಡಗಟ್ಟಿ ಹಲ್ಲೆ ಮಾಡಿ ವಸ್ತ್ರ ಹರಿದಿದ್ದಾನೆ ಎಂದು ಆರೋಪಿಸಲಾಗಿದೆ.
ಸಕಲೇಶಪುರ ಗ್ರಾಮಾಂತರ ಠಾಣೆಯಲ್ಲಿ ಯುವತಿಯು ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೋಲಿಸರು ಮದನ್ ನನ್ನು ವಶಕ್ಕೆ ಪಡೆದಿದ್ದಾರೆ.