×
Ad

ವರದಾ-ಬೆಡ್ತಿ ಜೋಡಣೆ ಗೊಂದಲ ನಿವಾರಣೆಗೆ ಸರಕಾರ ಸಭೆ ಕರೆಯಲಿ : ಬಸವರಾಜ ಬೊಮ್ಮಾಯಿ

Update: 2026-01-11 19:01 IST

ಹಾವೇರಿ : ವರದಾ-ಬೆಡ್ತಿ ನದಿ ಯೋಜನೆ ಜಾರಿಗೆ ಜನಜಾಗೃತಿ ಮೂಡಿಸಲು ಜಿಲ್ಲೆಯಲ್ಲೂ ಮಠಾಧೀಶರು, ಜನಪ್ರತಿನಿಧಿಗಳ ನೇತೃತ್ವದಲ್ಲಿ ಜನರನ್ನು ಸೇರಿಸಿ ಜಾಗೃತಿ ಸಮಾವೇಶ ಮಾಡಲಾಗುವುದು. ಗೊಂದಲ ನಿವಾರಣೆಗೆ ರಾಜ್ಯ ಸರಕಾರ ಸಭೆ ಕರೆಯಲಿ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ರವಿವಾರ ಹಾವೇರಿಯಲ್ಲಿ ಪಶ್ಚಿಮ ಘಟ್ಟಗಳನ್ನು ಉಳಿಸಿ, ವರದಾ-ಬೇಡ್ತಿ ವಿರೋಧಿಸಿ ಅಭಿಯಾನದ ಕುರಿತು ಪ್ರತಿಕ್ರಿಯಿಸಿದ ಅವರು, ವರದಾ-ಬೆಡ್ತಿ ನದಿ ಜೋಡಣೆ ಯೋಜನೆ ಇಂದಿನದಲ್ಲ. 1994ರಿಂದಲೇ ಇದೆ. ಅಂದಿನ ಯೋಜನೆಗೂ ಇಂದಿನ ಯೋಜನೆಗೂ ವ್ಯತ್ಯಾಸ ಇದೆ. ಈಗ ಪರಿಸರ ಹಾನಿ, ಅರಣ್ಯ ನಾಶ ಏನೂ ಆಗುವುದಿಲ್ಲ. ಬೆಡ್ತಿ ನದಿಯಿಂದ ಕಡಿಮೆ ನೀರನ್ನು ಎತ್ತುತ್ತಿದ್ದೇವೆ, ಯಾವುದೇ ನೀರಿನ ನಷ್ಟ ಆಗುವುದಿಲ್ಲ. ಸರಕಾರ ಆ ಭಾಗದಲ್ಲಿ ಸ್ವಾಮೀಜಿಗಳ ನೇತೃತ್ವದಲ್ಲಿ ನಡೆದಿರುವ ಹೋರಾಟಕ್ಕೆ ಮನವರಿಕೆ ಮಾಡಿಕೊಡಲಿ ಎಂದು ಹೇಳಿದರು.

ಚರ್ಚೆಗೆ ಸಿದ್ದ: ಈ ವಿಚಾರವಾಗಿ ಮುಕ್ತವಾಗಿ ಚರ್ಚಿಸಲು ನೀರಿನ ತಜ್ಞರು, ಪರಿಸರ ವಿಜ್ಞಾನಿಗಳನ್ನು ಕರೆಯಲಿ, ಸೌಹಾರ್ದಯುತ ನಿರ್ಣಯ ತೆಗದುಕೊಳ್ಳಬೇಕು. ಮಳೆಗಾಲದಲ್ಲಿ ನೀರು ಸಂಗ್ರಹ ಮಾಡಿದರೆ ನಮ್ಮ ಭಾಗಕ್ಕೆ ಅನುಕೂಲ ಆಗುತ್ತದೆ. ಇದನ್ನು ಭಾವನಾತ್ಮಕವಾಗಿ ನೋಡಬಾರದು. ಯಾರಿಗೂ ತೊಂದರೆ ಆಗದಂತೆ ಯೋಜನೆ ಮಾಡಬೇಕಿದೆ ಎಂದರು.

ರಾಜ್ಯ ಸರಕಾರ ಡಿಪಿಆರ್ ಮಾಡಲು ಒಪ್ಪಿಗೆ ಕೊಟ್ಟಿದೆ. ಡಿಪಿಆರ್ ಆದ ಬಳಿಕ ಸರಕಾರ ಸಭೆ ಕರೆಯಲಿ. ಯಾವುದೇ ನದಿ ನಿಂತ ನೀರಲ್ಲ. ಕೃಷ್ಣಾ ನದಿ ಮಹಾರಾಷ್ಟ್ರದಲ್ಲಿ ಹುಟ್ಟಿ ಆಂದ್ರ, ಕರ್ನಾಟಕದಲ್ಲಿ ಹರಿಯುತ್ತದೆ. ಬರಿ ಮಹಾರಾಷ್ಟ್ರಕ್ಕೆ ಮಾತ್ರವಲ್ಲ. ವರದಾ-ಬೆಡ್ತಿ ಯೋಜನೆ ಆಗಲೇಬೇಕಿದೆ, ಯಾವುದೇ ರೀತಿಯ ಚರ್ಚೆಗೆ ನಾವು ಸಿದ್ದ ಎಂದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News