×
Ad

ಹಾವೇರಿ: ಕಾರು ಢಿಕ್ಕಿ; ಇಬ್ಬರು ಪಾದಚಾರಿಗಳು ಸಾವು

Update: 2023-08-07 12:06 IST

ಹಾವೇರಿ: ರಸ್ತೆ ಅಪಘಾತದಲ್ಲಿ ಪಾದಚಾರಿಗಳಿಬ್ಬರು ಸಾವನ್ನಪ್ಪಿದ ಘಟನೆ ಶಿಗ್ಗಾವಿ ತಾಲೂಕಿನ ತಿಮ್ಮಾಪುರ ಕ್ರಾಸ್ ಬಳಿ ನಡೆದಿರುವ ಬಗ್ಗೆ ವರದಿಯಾಗಿದೆ.

ಮೃತರನ್ನು ನೀರಲಗಿ ಗ್ರಾಮದ ಚಿದಾನಂದ ಶೆರೆವಾಡ ಮತ್ತು ವಿರೋಪಾಕ್ಷಪ್ಪ ಕಾಳೆ ಎಂದು ಗುರುತಿಸಲಾಗಿದೆ.

ರಸ್ತೆ ದಾಟುತ್ತಿದ್ದ ವೇಳೆ ಪಾದಚಾರಿಗಳ ಮೇಲೆ ಕಾರು ಹರಿಸಿ ತಪ್ಪಿಸಿಕೊಂಡಿದ್ದ ಎನ್ನಲಾಗಿದೆ. ಶಿಗ್ಗಾಂವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಕಾರಿನ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News