×
Ad

ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು : ಸಲೀಂ ಅಹ್ಮದ್

Update: 2024-11-09 21:21 IST

ಸಲೀಂ ಅಹ್ಮದ್

ಶಿಗ್ಗಾಂವಿ : ನಮ್ಮ ಸಮೀಕ್ಷೆ ಪ್ರಕಾರ ಉಪ ಚುನಾವಣೆ ನಡೆಯುತ್ತಿರುವ ಮೂರು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ವಿಧಾನ ಪರಿಷತ್ತಿನ ಸರಕಾರದ ಮುಖ್ಯ ಸಚೇತಕ ಸಲೀಂ ಅಹ್ಮದ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿಗ್ಗಾಂವಿ ಕ್ಷೇತ್ರದಲ್ಲಿ ನಮ್ಮ ಅಭ್ಯರ್ಥಿ ಗೆಲ್ಲುತ್ತಾರೆ. ಕ್ಷೇತ್ರದಲ್ಲಿ ಕಾಂಗ್ರೆಸ್ ಪರವಾದ ಅಲೆ ಇದೆ. ಸರಕಾರ ರಚನೆ ಆದ ಮೇಲೆ ಗ್ಯಾರಂಟಿಗಳನ್ನು ಜಾರಿ ಗೊಳಿಸಿದ್ದೇವೆ. ನುಡಿದಂತೆ ನಡೆದಿದ್ದು ನಮ್ಮ ಸರಕಾರ. ಜೊತೆಗೆ ಅಭಿವೃದ್ಧಿ ಯೋಜನೆಗಳನ್ನು ಮಾಡುತ್ತಿದ್ದೇವೆ ಎಂದು ಹೇಳಿದರು.

ಜನರು ಸಂತೋಷದಿಂದ ಇದ್ದಾರೆ. ಇದನ್ನು ಸಹಿಸಿಕೊಳ್ಳಲಾರದೇ ಬಿಜೆಪಿ ನಾಯಕರು ಸರಕಾರದ ವಿರುದ್ಧ ಸುಳ್ಳು ಆರೋಪವನ್ನು ಮಾಡುತ್ತಿದ್ದಾರೆ. ಅದಕ್ಕೆ ಈ ಚುನಾವಣೆಯಲ್ಲಿ ಜನರು ಉತ್ತರ ಕೊಡಬೇಕಾಗಿದೆ. ಬಿಜೆಪಿಯವರು ಜನರ ಬಳಿ ಮತ ಕೇಳುವ ನೈತಿಕ ಹಕ್ಕನ್ನು ಕಳೆದುಕೊಂಡಿದ್ದಾರೆ ಎಂದು ಸಲೀಂ ಅಹ್ಮದ್ ಟೀಕಿಸಿದರು.

ನಾಳೆ ಶಿಗ್ಗಾಂವಿ ಕ್ಷೇತ್ರದಲ್ಲಿ ಬಹಿರಂಗ ಸಮಾವೇಶ ಇದೆ. ಅದರಲ್ಲಿ ಸಿಎಂ ಸಿದ್ದರಾಮಯ್ಯ ಭಾಗವಹಿಸುತ್ತಾರೆ. ಇದೊಂದು ಐತಿಹಾಸಿಕ ಸಭೆ ಆಗಲಿದೆ. ನಮ್ಮ ಪಕ್ಷದಿಂದ ಈ ಬಾರಿ ಕಣಕ್ಕಿಳಿಯಲು 14 ಜನ ಆಕಾಂಕ್ಷಿಗಳಿದ್ದರು. ಈಗ ಎಲ್ಲರೂ ಒಟ್ಟಾಗಿ ಸೇರಿ ಚುನಾವಣೆ ಮಾಡುತ್ತಿದ್ದಾರೆ. ನಮ್ಮ ಅಭ್ಯರ್ಥಿ ಇಲ್ಲಿ ಗೆಲ್ಲುವ ವಿಶ್ವಾಸವಿದೆ ಎಂದು ಅವರು ಹೇಳಿದರು.

Full View

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News