×
Ad

ಮಹದಾಯಿ ಯೋಜನೆ ಹಿನ್ನಡೆಗೆ ಕಾಂಗ್ರೆಸ್‌ನವರೇ ಕಾರಣ : ಬಸವರಾಜ ಬೊಮ್ಮಾಯಿ

Update: 2024-09-08 17:10 IST

ಬಸವರಾಜ ಬೊಮ್ಮಾಯಿ

ಹಾವೇರಿ: ಮಹದಾಯಿ ಯೋಜನೆಗೆ ಕಾಂಗ್ರೆಸ್ ನವರಿಂದಲೇ ಹಿನ್ನಡೆಯಾಗಿದ್ದು, ಕರ್ನಾಟಕಕ್ಕೆ ಮಹದಾಯಿಯ ಹನಿ ನೀರನ್ನು ಕೊಡುವುದಿಲ್ಲ ಎಂದು 2009ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದ್ದರು. ಟ್ರಿಬ್ಯುನಲ್ ಮಾಡುವ ಅಗತ್ಯ ಇಲ್ಲದಿದ್ದರೂ ಟ್ರಿಬ್ಯುನಲ್ ಮಾಡಿದರು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ರವಿವಾರ ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು.

ಮಹಾದಾಯಿ ವಿಚಾರವಾಗಿ ಕೇಂದ್ರಕ್ಕೆ ಸರ್ವಪಕ್ಷ ನಿಯೋಗ ಕರೆದೊಯ್ಯುವುದಾಗಿ ಕಾನೂನು ಸಚಿವ ಎಚ್.ಕೆ.ಪಾಟೀಲ್ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, "ಮಹದಾಯಿ ಯೋಜನೆಗೆ ಹಿನ್ನಡೆ ಮಾಡಿದ್ದರೆ ಅದು ಕಾಂಗ್ರೆಸ್. ಮಹದಾಯಿ ಹನಿ ನೀರನ್ನು ರಾಜ್ಯಕ್ಕೆ ಕೊಡುವುದಿಲ್ಲ ಎಂದು ಹಿಂದೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಹೇಳಿದ್ದರು. ಟ್ರಿಬ್ಯುನಲ್ ಅಧ್ಯಕ್ಷರಿಗೆ ನಾಲ್ಕೈದು ವರ್ಷ ಒಂದು ಆಫೀಸ್ ಕೂಡಾ ಕೊಡಲಿಲ್ಲ, ವಿಳಂಬ ಮಾಡಿದರು. ಟ್ರಿಬ್ಯುನಲ್ ನಲ್ಲಿ ತಾವೇ ಬರೆದು ಕೊಟ್ಟು, ನಾವು ನಿರ್ಮಿಸಿದ ಇಂಟಲ್ ಲಿಂಕಿಂಗ್ ಕೆನಾಲ್ ಗೆ ಗೋಡೆ ಕಟ್ಟಿದರು ಇದೆಲ್ಲಾ ಇತಿಹಾಸದಲ್ಲಿದೆ" ಎಂದು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News