ಹಾವೇರಿ: ಕಾಗಿನೆಲೆಗೆ ತೆರಳುವ ಮಾರ್ಗ ಮಧ್ಯೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಂಚಾರಿ ಕುರಿಗಾಹಿಗಳನ್ನು ಭೇಟಿ ಮಾಡಿ, ಅವರ ಸಮಸ್ಯೆಗಳನ್ನು ಆಲಿಸಿದರು.

ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಕುರುಬಗೊಂಡ ಗ್ರಾಮದ ಜಮೀನಿನಲ್ಲಿ ಕುರಿಗಾಹಿಗಳನ್ನು ಭೇಟಿಯಾದ ಮುಖ್ಯಮಂತ್ರಿ, ಅವರ ಬದುಕು, ಕುರಿ ಸಾಕಣೆ ಹಾಗೂ ಸಂಚಾರದ ವೇಳೆ ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಮಾಹಿತಿ ಪಡೆದರು.

ಕುರಿಗಾಹಿಗಳೊಂದಿಗೆ ಆತ್ಮೀಯವಾಗಿ ಮಾತುಕತೆ ನಡೆಸಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಅವರ ಅಹವಾಲುಗಳನ್ನು ಆಲಿಸಿದರು. ಈ ಸಂದರ್ಭದಲ್ಲಿ ಕುರಿಗಾಹಿಗಳು ನೀಡಿದ ಕುರಿಹಾಲನ್ನು ಮುಖ್ಯಮಂತ್ರಿ ಕುಡಿದರು. ಸಂಚಾರಿ ಕುರಿಗಾಹಿಗಳ ಜೀವನ ಮತ್ತು ಅವರ ಸಮಸ್ಯೆಗಳ ಕುರಿತು ವಿಚಾರಿಸಿದ ಈ ಭೇಟಿ ಗಮನ ಸೆಳೆಯಿತು.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor