ಹಾವೇರಿ | ಬಾಲಕಿಯ ಅತ್ಯಾಚಾರ: ನಾಲ್ವರ ವಿರುದ್ಧ ಪೊಕ್ಸೊ ಪ್ರಕರಣ ದಾಖಲು
Update: 2025-10-24 22:52 IST
ಸಾಂದರ್ಭಿಕ ಚಿತ್ರ (PTI)
ಹಾವೇರಿ: ಬಾಲಕಿ ಮೇಲೆ ನಾಲ್ವರು ಅತ್ಯಾಚಾರ ಎಸಗಿರುವ ಘಟನೆ ಹಾನಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಉದಯ ಕರಿಯಣ್ಣನವರ, ಕಿಶನ್ ವಡ್ಡರ, ಆಕಾಶ ಮಂತಗಿ ಹಾಗೂ ಚಂದ್ರು ಗೊಲ್ಲರ ಅತ್ಯಾಚಾರ ಎಸಗಿದ ಆರೋಪಿಗಳು ಎಂದು ತಿಳಿದು ಬಂದಿದೆ.
ಮಾರ್ಚ್‌ನಲ್ಲಿ ಇನ್‌ಸ್ಟಾಗ್ರಾಂ ಮೂಲಕ ಪರಿಚಯವಾಗಿದ್ದ ಆರೋಪಿ ಉದಯ ಕರಿಯಣ್ಣನವರ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಎನ್ನಲಾಗಿದ್ದು, ಬಳಿಕ ಎಪ್ರಿಲ್‌ನಲ್ಲಿ ಇನ್‌ಸ್ಟಾಗ್ರಾಂನಲ್ಲಿ ಪರಿಚಯವಾದ ಮತ್ತೋರ್ವ ಆರೋಪಿಯು ತನ್ನಿಬ್ಬರು ಗೆಳೆಯರ ಜೊತೆ ಸೇರಿ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಬಾಲಕಿ ಗರ್ಭಿಣಿ ಆಗುತ್ತಿದ್ದಂತೆ ಘಟನೆ ಬೆಳಕಿಗೆ ಬಂದಿದೆ.
ಈ ಸಂಬಂಧ ಹಾನಗಲ್ ಪೊಲೀಸ್ ಠಾಣೆಯಲ್ಲಿ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.