Haveri | ಹಿಜಾಬ್ ಧರಿಸಿದ್ದಕ್ಕೆ ಆಕ್ಷೇಪ; ಕೇಸರಿ ಶಾಲು ಧರಿಸಿ ಕಾಲೇಜಿಗೆ ಬಂದ ವಿದ್ಯಾರ್ಥಿಗಳು!
Update: 2025-12-04 23:25 IST
ಹಾವೇರಿ : ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜಿಗೆ ಬರುತ್ತಿದ್ದಾರೆ ಎಂದು ಆರೋಪಿಸಿ ಕೆಲವು ವಿದ್ಯಾರ್ಥಿಗಳು ಕೇಸರಿ ಶಾಲು ಹಾಕಿಕೊಂಡು ಕಾಲೇಜಿಗೆ ಬಂದ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಅಕ್ಕಿಆಲೂರು ತಾಲೂಕಿನ ಸಿ.ಜಿ.ಬೆಲ್ಲದ್ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದಿರುವುದಾಗಿ ವರದಿಯಾಗಿದೆ.
ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬರುತ್ತಿದ್ದ ಹಿನ್ನಲೆಯಲ್ಲಿ ಇದಕ್ಕೆ ಪ್ರತೀಕಾರವಾಗಿ ಕೆಲವು ವಿದ್ಯಾರ್ಥಿಗಳು ಕೇಸರಿ ಶಾಲು ಹಾಕಿಕೊಂಡು ಬಂದಿದ್ದಾರೆ ಎನ್ನಲಾಗಿದೆ. ಅಲ್ಲದೆ, ತರಗತಿ ಕೊಠಡಿಯಲ್ಲೇ ಕುಳಿತಿದ್ದಾರೆ.
ಹಲವು ದಿನಗಳಿಂದ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬರುತ್ತಿದ್ದರೂ ಈವರೆಗೆ ಕಾಲೇಜಿನ ಆಡಳಿತ ಮಂಡಳಿ ಯಾವುದೇ ಕ್ರಮ ಕೈಗೊಂಡಿಲ್ಲ. ಈ ಹಿನ್ನೆಲೆಯಲ್ಲಿ ಇನ್ನೊಂದು ಸಮುದಾಯದ ಕೆಲ ವಿದ್ಯಾರ್ಥಿಗಳು ಕೇಸರಿ ಶಾಲು ಹಾಕಿಕೊಂಡು ಬಂದಿದ್ದಾರೆ ಎಂದು ತಿಳಿದು ಬಂದಿದೆ