×
Ad

ಹಾವೇರಿ | ಕರ್ತವ್ಯ ಲೋಪ ಆರೋಪ : ಸರ್ಕಲ್ ಇನ್‌ಸ್ಪೆಕ್ಟರ್ ಸಹಿತ ಇಬ್ಬರ ಅಮಾನತು

Update: 2025-12-15 23:46 IST

ಹಾವೇರಿ, ಡಿ.15: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಪೋಷಕರು ಹಾಗೂ ಸಾರ್ವಜನಿಕರಿಂದ ಶಿಕ್ಷಕನಿಗೆ ಚಪ್ಪಲಿ ಹಾರ ಹಾಕಿ ಹಲ್ಲೆ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪದಡಿ ಜಿಲ್ಲೆಯ ಸವಣೂರು ಸರ್ಕಲ್ ಇನ್ಸ್ ಪೆಕ್ಟರ್ ಹಾಗೂ ಓರ್ವ ಪೊಲೀಸ್ ಕಾನ್‌ಸ್ಟೇಬಲ್‌ಅನ್ನು ದಾವಣಗೆರೆ ಐಜಿಪಿ ಬಿ.ಆರ್.ರವಿಕಾಂತೇಗೌಡ ಅಮಾನತು ಮಾಡಿ ಇಲಾಖೆ ವಿಚಾರಣೆ ನಡೆಸಲು ನಿರ್ದೇಶನ ನೀಡಿದ್ದಾರೆ. ಅಮಾನತಾದ ಅಧಿಕಾರಿಯನ್ನು ಸವಣೂರು ಸರ್ಕಲ್ ಇನ್‌ಸ್ಪೆಕ್ಟರ್ ದೇವಾನಂದ ಎಂದು ತಿಳಿದುಬಂದಿದೆ.

ವಿವರ :

ಸವಣೂರು ಸರಕಾರಿ ಉರ್ದು ಶಾಲೆಯಲ್ಲಿ ಶಿಕ್ಷಕ ಜಗದೀಶ್ ಎಂಬಾತ ಶಾಲೆಯ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದಡಿ ಆತನಿಗೆ ವಿದ್ಯಾರ್ಥಿನಿಯ ಪೋಷಕರು ಹಾಗೂ ಸಾರ್ವಜನಿಕರು ಹಲ್ಲೆ ನಡೆಸಿರುವ ಘಟನೆ ಡಿ.10ರಂದು ನಡೆದಿತ್ತು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಕ್ಷಕ ಹಾಗೂ ವಿದ್ಯಾರ್ಥಿನಿಯ ಪೋಷಕರು ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಪ್ರಕರಣ ಕುರಿತು ಪ್ರಾಥಮಿಕ ತನಿಖೆಗೆ ಹಾವೇರಿ ಎಸ್ಪಿ ಯಶೋಧಾ ಆದೇಶ ನೀಡಿದ್ದರು.

ಕಠಿಣ ಶಿಕ್ಷೆ ಆಗಲಿ :

ಈ ಪ್ರಕರಣದಲ್ಲಿ ತಪ್ಪುಮಾಡಿದವರಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ಶಿಗ್ಗಾಂವ-ಸವಣೂರು ಕ್ಷೇತ್ರದ ಶಾಸಕ ಯಾಸಿರ್ ಅಹ್ಮದ್ ಖಾನ್ ಪಠಾಣ್ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News