ಹಾವೇರಿ: ಪ್ರತೀ ಟನ್ ಕಬ್ಬಿಗೆ 5500 ರೂ. ನೀಡಬೇಕು. ಎಂ.ಎಸ್.ಪಿ. ದರ 31 ರೂ ಇದ್ದದ್ದು, 60 ರೂ ಆಗಬೇಕು. ಸ್ವಾಮಿನಾಥನ್ ವರದಿ ಜಾರಿಯಾಗಬೇಕು ಎಂದು ಆಗ್ರಹಿಸಿ ಜಿಲ್ಲೆಯ ಕಬ್ಬು ಬೆಳೆಗಾರರು ನಡೆಸುತ್ತಿರುವ ಹೋರಾಟ ತೀವ್ರಗೊಂಡಿದೆ. ಶನಿವಾರ ಧರಣಿನಿರತ ಕಬ್ಬು ಬೆಳಗಾರರು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರ ಅಣಕು ಶವಯಾತ್ರೆ ನಡೆಸುತ್ತಾ, ಹಾವೇರಿಯಿಂದ ಹುಬ್ಬಳ್ಳಿಗೆ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ.

ಹಾವೇರಿ ಪಟ್ಟಣದ ಹುಕ್ಕೇರಿ ಮಠದಿಂದ ಇಂದು ಆರಂಭಗೊಂಡ ಪಾದಯಾತ್ರೆಗೆ ದಿಂಗಾಲೇಶ್ವರ ಸ್ವಾಮೀಜಿ ಚಾಲನೆ ನೀಡಿದರು.

ದಿಲ್ಲಿ ಸಭೆಗೆ ರೈತರನ್ನು ಕರೆಯಿಸಿ ಯಾವುದೇ ಭರವಸೆ ನೀಡದೇ ಅವಮಾನ ಮಾಡಿ ಕಳುಹಿಸಿದ್ದಾರೆ. ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಸಲು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿಫಲರಾಗಿದ್ದಾರೆ ಎಂದು ಆರೋಪಿಸಿ, ಅವರ ಅಣಕು ಶವಯಾತ್ರೆ ನಡೆಸಲಾಗುತ್ತಿದೆ ಎಂದು ಧರಣಿನಿರತರು ತಿಳಿಸಿದ್ದಾರೆ.

ಹುಕ್ಕೇರಿ ಮಠದಿಂದ ಶುರುವಾದ ಪಾದಯಾತ್ರೆಯು ಎಂ.ಜಿ.ರಸ್ತೆ, ಹೊಸಮನಿ ಸಿದ್ದಪ್ಪ ವೃತ್ತ, ಹಳೇ ಪಿ.ಬಿ. ರಸ್ತೆಯ ಮೂಲಕ ಸಾಗಿದೆ. ರಾಷ್ಟ್ರೀಯ ಹೆದ್ದಾರಿ ಮೂಲಕ ಶಿಗ್ಗಾವಿ ಮಾರ್ಗವಾಗಿ ಪಾದಯಾತ್ರೆಯನ್ನು ಹುಬ್ಬಳ್ಳಿಗೆ ಸಾಗಲಿದೆ. ಹುಬ್ಬಳ್ಳಿಯಲ್ಲಿ ಸೋಮವಾರ ಸಚಿವ ಪ್ರಹ್ಲಾದ್ ಜೋಶಿ ಮನೆಗೆ ಮುತ್ತಿಗೆ ಕಾರ್ಯಕ್ರಮವಿದೆ ಎಂದು ರೈತರು ತಿಳಿಸಿದರು.

 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor