Haveri : ಗ್ರಾಮಸ್ಥರಲ್ಲಿ ತೀವ್ರ ಆತಂಕ ಮೂಡಿಸಿದ್ದ ಚಿರತೆ ಸೆರೆ
Update: 2025-12-04 12:51 IST
ಹಾವೇರಿ : ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲ್ಲೂಕಿನ ಕಡೂರು ಗ್ರಾಮದ ರೈತರಲ್ಲಿ ತೀವ್ರ ಆತಂಕ ಮೂಡಿಸಿದ್ದ ಚಿರತೆಯೊಂದನ್ನು ಅರಣ್ಯ ಇಲಾಖೆ ಅಧಿಕಾರಿಗಳು ಸೆರೆ ಹಿಡಿದಿದ್ದಾರೆ.
ಕಡೂರು ಗ್ರಾಮದ ಗುಡ್ಡದ ಸಮೀಪದ ರೈತರ ಜಮೀನಿನಲ್ಲಿ ಈ ಚಿರತೆಯನ್ನು ಸೆರೆ ಹಿಡಿಯಲಾಗಿದೆ. ಕಳೆದ ಒಂದು ತಿಂಗಳಿನಿಂದ ಈ ಪ್ರದೇಶದಲ್ಲಿ ನಿರಂತರವಾಗಿ ಅಡ್ಡಾಡುತ್ತಿದ್ದ ಚಿರತೆ ಕಾರಣ ರೈತರು ಭಯದಿಂದ ಕೃಷಿ ಕೆಲಸಕ್ಕೆ ಹೋಗಲು ಹಿಂದೇಟು ಹಾಕುತ್ತಿದ್ದರು.
ಕಳೆದ ವಾರದ ತೋಟದ ಮನೆಯೊಂದರ ಸಿಸಿಟಿವಿಯಲ್ಲಿ ಚಿರತೆ ಓಡಾಡುತ್ತಿರುವ ದೃಶ್ಯ ಸೆರೆಯಾಗಿತ್ತು. ಇದೀಗ ಚಿರತೆಯನ್ನು ಪತ್ತೆ ಮಾಡಿ, ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಚಿರತೆ ಬಿದ್ದಿದೆ. ಚಿರತೆ ಸೆರೆಯಿಂದ ಸುತ್ತಮುತ್ತಲಿನ ಭಾಗದ ರೈತರು ನಿಟ್ಟುಸಿರು ಬಿಟ್ಟಿದ್ದಾರೆ.