ಹಾವೇರಿ : ಜಿಲ್ಲೆಯಲ್ಲಿ ನಡೆದ ಸರಣಿ ಮನೆ ಕಳ್ಳತನ ಪ್ರಕರಣವನ್ನು ಭೇದಿಸಿದ ರಾಣೇಬೆನ್ನೂರು ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿ ಮುಬಾರಕ್ ಅಲಿಯಾಸ್ ಮೊಟಿಯಾ (25) ಎಂದು ಗುರುತಿಸಲಾಗಿದೆ.

ಸೆಂಟ್ರಿಂಗ್ ಕೆಲಸದ ಸೋಗಿನಲ್ಲಿ ಮನೆಗಳ ಮಾಹಿತಿ ಪಡೆದು, ಬೀಗ ಹಾಕಿದ ಮನೆಗಳನ್ನು ಗುರಿಯಾಗಿಸಿಕೊಂಡು ಈತ ಕಳ್ಳತನ ಮಾಡುತ್ತಿದ್ದ ಎನ್ನಲಾಗಿದೆ. ರಾಣೇಬೆನ್ನೂರು ಹಾಗೂ ಹರಿಹರದಲ್ಲಿ ರಾತ್ರಿ ವೇಳೆ ಮನೆಗಳನ್ನೇ ಟಾರ್ಗೆಟ್ ಮಾಡುತ್ತಿದ್ದ ಆರೋಪಿ, ಜೈಲಿನಿಂದ ಬಿಡುಗಡೆಯಾದ ಬಳಿಕ ಮತ್ತೆ ಕಳ್ಳತನದ ಕೃತ್ಯಗಳಲ್ಲಿ ತೊಡಗಿದ್ದ ಎನ್ನಲಾಗಿದೆ.

ಆರೋಪಿಯಿಂದ ಚಿನ್ನದ ಜುಮುಕಿ, ಬ್ರೇಸ್‌ಲೆಟ್, ಮಕ್ಕಳ ಚಿನ್ನದ ಆಭರಣಗಳು, ಬೆಳ್ಳಿಯ ದೀಪದ ಕಂಬ, ಕಾಮಾಕ್ಷಿ ದೀಪ ಸೇರಿದಂತೆ ಹಲವು ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸ್ವತ್ತುಗಳ ಒಟ್ಟು ಮೌಲ್ಯ 5.97 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಹಾವೇರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ ಅವರ ಮಾರ್ಗದರ್ಶನದಲ್ಲಿ ರಾಣೇಬೆನ್ನೂರು ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ಮದರಸಾಬ್‌ ಹಾವೇರಿ/ವಾರ್ತಾಭಾರತಿ

contributor