×
Ad

ಹಾವೇರಿ | ಅತ್ಯಾಚಾರ ಪ್ರಕರಣ : ಜಾಮೀನು ಪಡೆದು ಹೊರ ಬರುತ್ತಿದ್ದಂತೆಯೇ ಆರೋಪಿಗಳಿಂದ ರೋಡ್‌ ಶೋ; ಪೊಲೀಸ್‌ ವಶಕ್ಕೆ

Update: 2025-05-23 17:59 IST

ಹಾವೇರಿ : ಹಾನಗಲ್ ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿ ಮೇ 20ರಂದು ಜಾಮೀನು ಪಡೆದು ಹೊರ ಬರುತ್ತಿದ್ದಂತೆ ಆರೋಪಿಗಳು ರೋಡ್ ಶೋ ನಡೆಸಿದ್ದು, ಜಾಮೀನು ನಿಯಮ ಉಲ್ಲಂಘಿಸಿದ ಆರೋಪದಲ್ಲಿ ಐವರು ಆರೋಪಿಗಳನ್ನು ಮತ್ತೆ ವಶಕ್ಕೆ ಪಡೆದಿರುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಕಾರಿ ಅಂಶುಕುಮಾರ್ ಮಾಹಿತಿ ನೀಡಿದ್ದಾರೆ.

ಅತ್ಯಾಚಾರಕ್ಕೆ ಒಳಗಾದ ಸಂತ್ರಸ್ತ ಮಹಿಳೆಯು ಆರೋಪಿ ಗಳನ್ನು ಗುರುತಿಸಲು ವಿಲವಾದ ಹಿನ್ನೆಲೆಯಲ್ಲಿ ಹಾವೇರಿ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಆರೋಪಿಗಳಾದಾಫ್ತಾಬ್ ಚಂದನಕಟ್ಟಿ, ಮದರ್ ಸಾಬ್ ಮಂಡಕ್ಕಿ, ಸಮೀವುಲ್ಲಾ ಲಾಲನವರ, ಮಹಮದ್ ಸಾದಿಕ್ ಅಗಸಿಮನಿ, ಶೊಯಿಬ್ ಮುಲ್ಲಾ, ತೌಸೀಫ್ ಚೋಟಿ ಹಾಗೂ ರಿಯಾಝ್‌ ಸಾವಿಕೇರಿಗೆ ಜಾಮೀನು ಮಂಜೂರು ಮಾಡಿತ್ತು.

ಜಾಮೀನು ಸಿಗುತ್ತಿದ್ದಂತೆ ಆರೋಪಿಗಳು ಹಾವೇರಿ ಸಬ್ ಜೈಲಿನಿಂದ ಅಕ್ಕಿ ಆಲೂರ ಪಟ್ಟಣದವರೆಗೆ ಐದು ಕಾರುಗಳಲ್ಲಿ 20ಕ್ಕೂ ಹೆಚ್ಚು ಹಿಂಬಾಲಕರ ಜೊತೆ ರೋಡ್ ಶೋ ನಡೆಸಿರುವ ವೀಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

2024ರ ಜ.8ರಂದು ತನ್ನ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಎಸಗಲಾಗಿದೆ ಎಂದು ಸಂತ್ರಸ್ತೆ ಹಾನಗಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರು ಆಧರಿಸಿ ಪೊಲೀಸರು 19 ಮಂದಿ ಆರೋಪಿಗಳನ್ನು ಬಂಸಿದ್ದರು. ಜೈಲುಪಾಲಾಗಿದ್ದ 19 ಮಂದಿ ಆರೋಪಿಗಳ ಪೈಕಿ 12 ಜನರು 10 ತಿಂಗಳ ಹಿಂದೆಯೇ ಜಾಮೀನು ಪಡೆದಿದ್ದರು. ಪ್ರಮುಖ ಆರೋಪಿಗಳ ಜಾಮೀನು ಅರ್ಜಿಗಳನ್ನು ನ್ಯಾಯಾಲಯ ಹಲವು ಬಾರಿ ತಿರಸ್ಕರಿಸಿತ್ತು. ಇದೀಗ ಸಂತ್ರಸ್ತೆ ನ್ಯಾಯಾಲಯದ ಮುಂದೆ ನೀಡಿದ್ದ ಹೇಳಿಕೆಗಳನ್ನು ಉಳಿಸಿಕೊಳ್ಳಲು ವಿಲವಾದ ಹಿನ್ನೆಲೆಯಲ್ಲಿ ಆರೋಪಿಗಳಿಗೆ ಜಾಮೀನು ಸಿಕ್ಕಿದೆ ಎಂದು ಎಸ್ಪಿ ತಿಳಿಸಿದ್ದಾರೆ.

ಜಾಮೀನು ರದ್ದತಿಗೆ ಅರ್ಜಿ :

ಸಾಮೂಹಿಕ ಅತ್ಯಾಚಾರ ಪ್ರಕರಣದ 7 ಆರೋಪಿಗಳ ಹೆಸರು ರೌಡಿಶೀಟರ್ ಪಟ್ಟಿಯಲ್ಲಿದೆ. ಜಾಮೀನು ಮಂಜೂರಾದ ನಂತರವೂ ನಿಯಮ ಉಲ್ಲಂಘಿಸಿ ರೋಡ್ ಶೋ ನಡೆಸಿದ್ದಾರೆ. ಈ ಬೆನ್ನಲ್ಲೇ ಅವರ ಜಾಮೀನು ರದ್ದು ಮಾಡುವಂತೆ ಆಗ್ರಹಿಸಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಾಗುವುದು ಎಂದು ಹಾವೇರಿ ಜಿಲ್ಲಾ ಪೊಲೀಸ್ ವರಿಷ್ಠಾಕಾರಿ ಅಂಶುಕುಮಾರ್ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News