ಹಾವೇರಿ | ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಪೋಷಕರು, ಸಾರ್ವಜನಿಕರಿಂದ ಶಿಕ್ಷಕನಿಗೆ ಹಲ್ಲೆ
Update: 2025-12-10 22:14 IST
ಹಾವೇರಿ: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಪೋಷಕರು ಹಾಗೂ ಸಾರ್ವಜನಿಕರು ಶಿಕ್ಷಕನಿಗೆ ಚಪ್ಪಲಿ ಹಾರ ಹಾಕಿ ಹಲ್ಲೆ ನಡೆಸಿರುವ ಘಟನೆ ಬುಧವಾರ ವರದಿಯಾಗಿದೆ.
ಹಲ್ಲೆಗೊಳಗಾದ ಶಿಕ್ಷಕನನ್ನು ಹಾವೇರಿ ಜಿಲ್ಲೆ ಸವಣೂರು ಪಟ್ಟಣದ ಸರಕಾರಿ ಉರ್ದು ಶಾಲೆಯ ಶಿಕ್ಷಕ ಜಗದೀಶ್ ಎಂದು ಗುರುತಿಸಲಾಗಿದೆ.
ಶಿಕ್ಷಕ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರುವುದಾಗಿ ಆರೋಪಿಸಿ ಹಲ್ಲೆ ನಡೆಸಿ ಬಳಿಕ ಸವಣೂರು ಪೊಲೀಸರಿಗೆ ಒಪ್ಪಿಸಿದ ಪೋಷಕರು, ತಪ್ಪಿತಸ್ಥನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.