×
Ad

ಹಾವೇರಿ | ಲಂಚ ಪಡೆಯುತ್ತಿದ್ದ ವೇಳೆ ಹಾನಗಲ್ ತಹಶೀಲ್ದಾರ್‌ ಕಚೇರಿಯ ಶಿರಸ್ತೇದಾರ ಸೇರಿ ಮೂವರು ಲೋಕಾಯುಕ್ತ ಬಲೆಗೆ

Update: 2025-10-18 15:43 IST

ಹಾವೇರಿ: ಆರ್‌ಟಿಸಿ ದುರಸ್ಥಿ ಕಾರ್ಯಕ್ಕಾಗಿ 12 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ತಹಶೀಲ್ದಾರ್‌ ಕಚೇರಿಯ ಶಿರಸ್ತೇದಾರ ಸೇರಿ ಮೂವರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಹಾವೇರಿ ಜಿಲ್ಲೆಯ ಹಾನಗಲ್ ತಹಶೀಲ್ದಾರ್‌ ಕಚೇರಿಯ ಶಿರಸ್ತೇದಾರ ತಮ್ಮಣ್ಣ ಕಾಂಬಳೆ ಹಾಗೂ ದ್ವಿತೀಯ ದರ್ಜೆ ಸಹಾಯಕರು ಗೂಳಪ್ಪ ಮನಗೂಳಿ ಮತ್ತು ಶಿವಾನಂದ ಬಡಿಗೇರರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

ಬೊಮ್ಮನಹಳ್ಳಿ ಗ್ರಾಮದ ಶಂಕ್ರಪ್ಪ ಗುಮಗುಂಡಿ ಅವರ ಆರ್‌ಟಿಸಿ ದುರಸ್ಥಿ ಅರ್ಜಿಯ ಪ್ರಕ್ರಿಯೆ ಮಾಡಲು ಲಂಚ ಬೇಡಿಕೆಯಿಟ್ಟಿದ್ದ ಮೂವರೂ, ಹಣ ಸ್ವೀಕರಿಸುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.

ನವೀನ ಪಾಟೀಲ ಎಂಬವರ ದೂರಿನ ಮೇರೆಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಮೂವರನ್ನೂ ಬಂಧಿಸಿದ್ದು, ಹಾವೇರಿ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News