×
Ad

ಹಾವೇರಿ: ಎರಡು ಬಸ್‌ ಗಳು ಮುಖಾಮುಖಿ ಢಿಕ್ಕಿ; 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

Update: 2024-08-18 10:59 IST

ಹಾವೇರಿ: ವಾಯವ್ಯ ಸಾರಿಗೆ ಹಾಗೂ ಈಶಾನ್ಯ ಸಾರಿಗೆಯ ಎರಡು ಬಸ್ ಗಳು ಮುಖಾಮುಖಿ ಢಿಕ್ಕಿಯಾದ ಪರಿಣಾಮ 20 ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಸವಣೂರು ತಾಲೂಕಿನ ಯಲವಿಗಿ ಅಂಡರ್ ಪಾಸ್ ಬಳಿ ನಡೆದಿದೆ.

ಗಾಯಳುಗಳನ್ನ ಸವಣೂರು ಸಾರ್ವಜನಿಕ ಪ್ರಾಥಮಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News