×
Ad

ಹಾವೇರಿ | ಲೋಕಾಯುಕ್ತ ದಾಳಿಯಿಂದ ಗಾಬರಿಗೊಂಡು 9 ಲಕ್ಷ ರೂ. ಹಣದ ಗಂಟನ್ನು ಕಿಟಕಿಯಿಂದ ಎಸೆದ ಇಂಜಿನಿಯರ್!

Update: 2024-11-12 17:36 IST

ಹಾವೇರಿ : ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ರಾಜ್ಯದ ಹಲವೆಡೆ ಸರಕಾರಿ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿದ್ದು, ಹಾವೇರಿಯಲ್ಲೂ ಬೆಳ್ಳಂಬೆಳಗ್ಗೆ ದಾಳಿ ನಡೆಸಿ ಅಧಿಕಾರಿಗಳ ನಿವಾಸಗಳಿಂದ ಹಣ, ದಾಖಲೆಗಳನ್ನು ವಶಪಡಿಸಿಕೊಂಡು ಪರಿಶೀಲನೆ ನಡೆಸಿದರು.

ಹಾವೇರಿಯ ಬಸವೇಶ್ವರನಗರದ 1ನೇ ಕ್ರಾಸ್‌ನಲ್ಲಿರುವ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯ ಹಿರೇಕೆರೂರು ಉಪ‌ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (ಎಇ) ಕಾಶಿನಾಥ್ ಭಜಂತ್ರಿ ಅವರ ಮನೆ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ‌ ಪರಿಶೀಲನೆ ನಡೆಸಿದರು.

ಬೆಳಗಿನಜಾವ ಅಧಿಕಾರಿಗಳ ತಂಡ ಬಾಗಿಲು ಬಡಿದಿತ್ತು. ಅವರನ್ನು ನೋಡಿ ಗಾಬರಿಗೊಂಡ ಕಾಶಿನಾಥ್ ಅವರು, ಕೊಠಡಿಗೆ ಹೋಗಿ 9 ಲಕ್ಷ‌ ರೂ. ಹಣದ ಗಂಟನ್ನು ಶೌಚಾಲಯದ ಕಿಟಕಿಯ ಮೂಲಕ ಹೊರಗೆ ಎಸೆದಿದ್ದರು. ಆದರೆ, ಇದನ್ನು ತಕ್ಷಣ ಗಮನಿಸಿದ ಲೋಕಾಯುಕ್ತ ಅಧಿಕಾರಿಗಳು ಅದನ್ನೂ ವಶಪಡಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

Full View

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News