ಹಾವೇರಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಕಾರ್ಯಪಾಲಕ ಇಂಜಿನಿಯರ್ ಎಸ್. ಎಸ್ ಮತ್ತಿಕಟ್ಟಿ ಮನೆ ಮೇಲೆ ಲೋಕಾಯುಕ್ತ ದಾಳಿ
Update: 2025-11-25 12:15 IST
ಹಾವೇರಿ: ಹಾವೇರಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಕಾರ್ಯಪಾಲಕ ಇಂಜಿನಿಯರ್ ಶೇಖಪ್ಪ ಸಣ್ಣಪ್ಪ ಮತ್ತಿಕಟ್ಟಿ ಅವರ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಆದಾಯಕ್ಕಿಂತ ಹೆಚ್ಚು ಸಂಪತ್ತು ಗಳಿಕೆ ಆರೋಪ ಹೊಂದಿರುವ ಶೇಖಪ್ಪ ಸಣ್ಣಪ್ಪ ಮತ್ತಿಕಟ್ಟಿ ಅವರಿಗೆ ಸಂಬಂಧಿಸಿದ ಮನೆಗಳು, ವಾಣಿಜ್ಯ ಸಂಕೀರ್ಣ ಸೇರಿ 6 ಕಡೆ ದಾಳಿ ನಡೆದಿದೆ.
ಶೇಖಪ್ಪ ಒಟ್ಟು 17 ನಿವೇಷನಗಳು, 1 ವಾಣಿಜ್ಯ ಕಟ್ಟಡ, 2 ವಸತಿ ಕಟ್ಟಡಗಳು ಸೇರಿದಂತೆ ಸಂಬಂಧಿಕರ ಹೆಸರಲ್ಲೂ ಅಕ್ರಮ ಆಸ್ತಿ ಹೊಂದಿದ್ದಾರೆ ಎಂದು ತಿಳಿದು ಬಂದಿದೆ.
ಒಟ್ಟು 3, 46, 68,587 ರೂಪಾಯಿ ಮೌಲ್ಯದ ಅಕ್ರಮ ಆಸ್ತಿ ಹೊಂದಿರೋ ಶೇಖಪ್ಪ ಸಣ್ಣಪ್ಪ ಮತ್ತಿಕಟ್ಟಿ ಅವರು, ಹುಬ್ಬಳ್ಳಿ ಅಕ್ಷಯ ಪಾರ್ಕ್ ನಲ್ಲಿ 3 ಗುಂಟೆ 8 ಅಣೆ ವಿಸ್ತೀರ್ಣದ ಕಮರ್ಷಿಯಲ್ ಕಾಂಪ್ಲೆಕ್ಸ್, ಹುಬ್ಬಳ್ಳಿ ಬೈರಿದೇವರಿಕೊಪ್ಪ ಗ್ರಾಮದಲ್ಲಿ 2 ಅಂತಸ್ತಿನ ಮನೆ, ದಾವಣಗೆರೆಯಲ್ಲಿಯೂ ಮನೆ ಸೇರಿದಂತೆ ಹಲವು ಕಡೆ ಅಕ್ರಮ ಹಣದಲ್ಲಿ ಆಸ್ತಿ ಖರೀದಿಸಿರುವ ಆರೋಪ ಕೇಳಿ ಬಂದಿದೆ.