ಬ್ಯಾಡಗಿ ಶಾಸಕ ಬಸವರಾಜ್ ಶಿವಣ್ಣನವರ ಅವರಿಗೆ ಲಘು ಹೃದಯಾಘಾತ; ಆಸ್ಪತ್ರೆಗೆ ದಾಖಲು
ಬ್ಯಾಡಗಿ ಶಾಸಕ ಬಸವರಾಜ್ ಶಿವಣ್ಣನವರ
ಹಾವೇರಿ : ಹಾವೇರಿಯ ಬ್ಯಾಡಗಿ ಶಾಸಕ ಬಸವರಾಜ್ ಶಿವಣ್ಣನವರ ಆರೋಗ್ಯದಲ್ಲಿ ಏರುಪೇರು ಆಗಿದ್ದು ಇಂದು ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿದೆ.
ನಾಳೆ ಹಾವೇರಿಯಲ್ಲಿ ರಾಜ್ಯ ಸರಕಾರ 1000 ದಿನಗಳ ಯಶಸ್ವಿಯಾಗಿ ಪೂರೈಸಿದ ಹಿನ್ನಲೆಯಲ್ಲಿ ಸಾಧನಾ ಸಮಾವೇಶ ಹಮ್ಮಿಕೊಂಡಿದ್ದು ಇದರ ಪೂರ್ವ ಸಿದ್ದತೆಯ ಕೆಲಸವನ್ನು ವಿಕ್ಷಣೆ ಮಾಡಿ ಮನೆಗೆ ಹೋದಾಗ ಗುರುವಾರ ರಾತ್ರಿ ಆಯಾಸ ಹಾಗು ಎದೆಯಲ್ಲಿ ನೋವು ಕಾಣಿಸಿಕೊಂಡಿದ್ದು ಇಂದು ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಬಸವರಾಜ್ ಶಿವಣ್ಣನವರಗೆ ಹುಬ್ಬಳ್ಳಿಯ ವಿಹಾನ್ ಆಸ್ಪತ್ರೆಯಲ್ಲಿ ಹೃದಯ ಸಮಸ್ಯೆ ಇರುವದು ಪತ್ತೆಹಚ್ಚಿದ ವೈದ್ಯರು ನಂತರ ಹೃದಯದ ಶಸ್ತ್ರ ಚಿಕಿತ್ಸೆ ಮಾಡಿ ಸ್ಟಂಟ್ ಗಳನ್ನ ಅಳವಡಿಕೆ ಮಾಡಿ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆಸಿದ್ದಾರೆ.
ಸುದ್ದಿ ತಿಳಿದ ತಕ್ಷಣ ಸಚಿವ ಶಿವಾನಂದ ಪಾಟೀಲ್ ಹಾಗು ವಿಧಾನ ಸಭೆ ಉಪ ಸಭಾಪತಿ ರುದ್ರಪ್ಪ ಲಮಾಣಿ, ಹಾನಗಲ್ ಶಾಸಕ ಶ್ರೀನಿವಾಸ್ ಮಾನೆ ಹಾಗು ಕಾಂಗ್ರೆಸ್ ನ ನಾಯಕರು ಆಸ್ಪತ್ರೆಗೆ ಭೇಟಿ ನೀಡಿ ಬಸವರಾಜ್ ಶಿವಣ್ಣನವರ ಆರೋಗ್ಯವನ್ನು ವಿಚಾರಿಸಿದ್ದಾರೆ.