×
Ad

ಯಾವುದೇ ಅಭಿವೃದ್ಧಿ ಕೆಲಸ ಮಾಡದ ಬೊಮ್ಮಾಯಿ: ಯಾಸಿರ್ ಪಠಾಣ್

Update: 2024-10-27 23:32 IST

ಶಿಗ್ಗಾಂವಿ : ಶಿಗ್ಗಾಂವಿಯಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದ ಬಸವರಾಜ ಬೊಮ್ಮಾಯಿ ಕಳೆದ ಒಂದೂವರೆ ವರ್ಷದಲ್ಲಿ ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ. ಕ್ಷೇತ್ರದಲ್ಲಿ ತಲೆ ಎತ್ತಿಕೊಂಡು ಓಡಾಡಲು ಆಗುವುದಿಲ್ಲ. ಎಲ್ಲ ರಸ್ತೆಗಳು ಹದಗೆಟ್ಟಿವೆ. ಮತದಾರರು ನನಗೆ ಅವಕಾಶ ಮಾಡಿಕೊಟ್ಟರೆ ಖಂಡಿತವಾಗಿ ಅಭಿವೃದ್ಧಿ ಮಾಡಿ ತೋರಿಸುವೆ ಎಂದು ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಅಹ್ಮದ್ ಖಾನ್ ಪಠಾಣ್ ಹೇಳಿದರು.

ರವಿವಾರ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮಗಳಿಗೆ ತೆರಳಿ ಮತಯಾಚನೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲ ಕಡೆ ನಮಗೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ. ಜನ ನನಗೆ ಆಶೀರ್ವಾದ ಮಾಡಲಿದ್ದಾರೆ ಎಂಬ ವಿಶ್ವಾಸವಿದೆ. ನಮ್ಮಲ್ಲಿ ಯಾವುದೇ ಬಂಡಾಯ ಇಲ್ಲ ಎಂದು ಹೇಳಿದರು.

ಅಜ್ಜಂಪೀರ್ ಖಾದ್ರಿ ಸೇರಿದಂತೆ ಎಲ್ಲ ಟಿಕೆಟ್ ಆಕಾಂಕ್ಷಿಗಳಿಗೂ ಯೋಗ್ಯತೆ ಇತ್ತು. ಆದರೆ ನನಗೆ ಯೋಗ್ಯತೆ ಜೊತೆಗೆ ಯೋಗ ಬಂದಿದೆ. ಅದರಿಂದಾಗಿಯೇ, ಟಿಕೆಟ್ ಸಿಕ್ಕಿದೆ. ಕ್ಷೇತ್ರದ ಎಲ್ಲ ಕಾರ್ಯಕರ್ತರು, ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು, ನಮ್ಮ ನಾಯಕರ ಮಾರ್ಗದರ್ಶನದಂತೆ ಚುನಾವಣೆ ಎದುರಿಸುತ್ತೇನೆ ಎಂದು ಯಾಸಿರ್ ಅಹ್ಮದ್ ಖಾನ್ ಪಠಾಣ್ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News