×
Ad

ಸಮಾಜಘಾತಕ ಶಕ್ತಿಗಳನ್ನು ಮಟ್ಟಹಾಕಲು ವಿಶೇಷ ಪಡೆಯ ಅಗತ್ಯವಿದೆ: ಸಿಎಂ ಸಿದ್ದರಾಮಯ್ಯ

Update: 2025-05-04 15:50 IST

ಹಾವೇರಿ: ಸಮಾಜಘಾತಕ ಶಕ್ತಿಗಳನ್ನು ಮಟ್ಟಹಾಕಲು ಹಾಗೂ ಪತ್ತೆ ಹಚ್ಚಲು ಒಂದು ವಿಶೇಷ ಪಡೆಯ ಅಗತ್ಯವಿದೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಅಕ್ಕಿ ಆಲೂರಿನ ಎನ್.ಡಿ. ಪಿಯು ಕಾಲೇಜ್ ಆವರಣದಲ್ಲಿ ಮಾಧ್ಯಮದರೊಂದಿಗೆ ಮಾತನಾಡುತ್ತಿದ್ದರು.

ಕರಾವಳಿಯಲ್ಲಿ ಕೋಮು ಹಿಂಸೆ ನಿಗ್ರಹ ಕಾರ್ಯಪಡೆ ರಚಿಸಲು ಸರ್ಕಾರ ಮುಂದಾಗಿರುವ ಬಗ್ಗೆ ಮಾತನಾಡಿದ ಮುಖ್ಯಮಂತ್ರಿ, ಗೃಹ ಸಚಿವರೊಂದಿಗೆ ಮಾತನಾಡಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಮಂಗಳೂರಿನಲ್ಲಿ ಫಾಝಿಲ್ ಹತ್ಯೆಯಾದಾಗ ಸರಕಾರ 25 ಲಕ್ಷ ರೂ. ಪರಿಹಾರ ನೀಡಿತ್ತು. ಸುಹಾಸ್ ಶೆಟ್ಟಿ ಹತ್ಯೆಗೆ ಫಾಝಿಲ್ ಸಹೋದರ ಸುಪಾರಿ ನೀಡಿದ್ದಾರೆ ಎಂದು ಪೊಲೀಸರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದು, ಸರ್ಕಾರ ನೀಡಿರುವ ಪರಿಹಾರದ ಹಣ ದುರ್ಬಳಕೆಯಾಗಿದೆಯೇ ಎಂಬ ಸುದ್ದಿಗಾರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ, ಈ ಬಗ್ಗೆ ತನಗೆ ತಿಳಿದಿಲ್ಲ. ನಿನ್ನೆ ಸಚಿವ ದಿನೇಶ್ ಗುಂಡೂರಾವ್ ಹಾಗೂ ಗೃಹ ಸಚಿವ ಜಿ.ಪರಮೇಶ್ವರ್ ಇಬ್ಬರೂ ಮಂಗಳೂರಿಗೆ ಭೇಟಿ ನೀಡಿದ್ದಾರೆ. ಅವರೊಂದಿಗೆ ಮಾತನಾಡಿದ ನಂತರ ಪ್ರತಿಕ್ರಿಯೆ ನೀಡುವುದಾಗಿ ತಿಳಿಸಿದರು.

ವಿಜಯನಗರದಲ್ಲಿ ಎರಡು ವರ್ಷಗಳ ಸಾಧನೆಯ ಕಾರ್ಯಕ್ರಮ :

ಸರ್ಕಾರಕ್ಕೆ ಎರಡು ವರ್ಷಗಳು ತುಂಬುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆಯೇ ಎಂಬ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ವಿಜಯನಗರ ಜಿಲ್ಲೆಯಲ್ಲಿ ಎರಡು ವರ್ಷಗಳ ಸಾಧನೆಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

ʼಜಾತಿಗಣತಿʼ ಶಂಖದಿಂದ ಬಂದರೆ ಮಾತ್ರ ತೀರ್ಥ :

ಜಾತಿಗಣತಿಯನ್ನು ಮಾಡಿಸುವ ಮೂಲಕ ಸಿದ್ದರಾಮಯ್ಯ ಜಾತಿ ಜಾತಿಗಳ ನಡುವೆ ಸಂಘರ್ಷಕ್ಕೆ ಎಡೆಮಾಡಿಕೊಡುತ್ತಿದ್ದಾರೆ ಎಂದು ಟೀಕೆ ಮಾಡುತ್ತಿದ್ದವರು ಕೇಂದ್ರ ಸರಕಾರ ಜಾತಿಗಣತಿ ಮಾಡಿಸುವುದನ್ನು ಮುಕ್ತ ಮನಸ್ಸಿನಿಂದ ಸ್ವಾಗತ ಮಾಡುತ್ತಿದ್ದಾರೆ. ಶಂಖದಿಂದ ಬಂದರೆ ಮಾತ್ರ ತೀರ್ಥ ಎಂಬಂತಾಗಿದೆ. ಮೊದಲು ರಾಜಕೀಯವಾಗಿ ಹೇಳುತ್ತಿದ್ದರು. ವಾಸ್ತವಿಕತೆಯ ಆಧಾರದ ಮೇಲೆ ಹೇಳುತ್ತಿರಲಿಲ್ಲ ಎಂದು ಅರ್ಥವಾಗುತ್ತದೆ ಅಲ್ಲವೇ ? ಎಂದು ಮುಖ್ಯಮಂತ್ರಿ ಪ್ರಶ್ನಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News