×
Ad

ಬೆಂಗಳೂರಿನಲ್ಲಿ ಭಾರೀ ಮಳೆ; ವಾಹನ ಸವಾರರ ಪರದಾಟ

Update: 2023-08-31 23:17 IST

Photo- Twitter @Jahnaviravindra

ಬೆಂಗಳೂರು: ನಗರದಲ್ಲಿ ಭಾರೀ ಮಳೆಯಾಗಿದ್ದು, ಬಸವನಗುಡಿ, ಬನಶಂಕರಿ, ಜಯನಗರ, ಕಾರ್ಪೊರೇಷನ್ ಸರ್ಕಲ್, ಸಂಪಂಗಿರಾಮ ನಗರ, ಡಬಲ್ ರೋಡ್, ಯಶವಂತಪುರ, ಹೆಬ್ಬಾಳ, ಮೆಜೆಸ್ಟಿಕ್, ಗಾಂಧಿ ನಗರ, ಕೆ.ಆರ್. ಸರ್ಕಲ್, ರಾಜಾಜಿನಗರ ಸೇರಿ ಹಲವು ಕಡೆಗಳಲ್ಲಿ ಮಳೆಯಾಗಿದೆ. 

ದಿಢೀರ್ ಮಳೆಯಿಂದಾಗಿ ವಾಹನ ಸವಾರರು ಹಾಗೂ ಸಾರ್ವಜನಿಕರಿಗೆ ತೊಂದರೆ ಅನುಭವಿಸಿದರು.  ಹಲವು ಕಡೆಗಳಲ್ಲಿ ಸಂಚಾರ ದಟ್ಟಣೆ ಕಂಡು ಬಂತು.

ಭಾರತೀಯ ಹವಾಮಾನ ಇಲಾಖೆ ರಾಜಧಾನಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಮೂರು ಗಂಟೆಗಳ ಕಾಲ ಮಳೆಯಾಗುವ ಮುನ್ಸೂಚನೆಯನ್ನು ನೀಡಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News