×
Ad

ಉಡುಪಿಯಲ್ಲಿ ಭಾರೀ ಮಳೆ; ಜಿಲ್ಲೆಯ ಎಲ್ಲಾ ಶಾಲೆಗಳಿಗೆ ಇಂದು ರಜೆ

Update: 2025-05-30 07:43 IST

ಉಡುಪಿ, ಮೇ 30: ಜಿಲ್ಲೆಯಾದ್ಯಂತ ಭಾರೀ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ ಹಾಗೂ ಒಂದರಿಂದ ಹತ್ತನೇ ತರಗತಿವರೆಗೆ ( ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆ ) ಇಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಆದೇಶ ಹೊರಡಿಸಿದ್ದಾರೆ.

ಇದರಿಂದ ಬೇಸಿಗೆ ರಜೆ ಮುಗಿದು ಇಂದಿನಿಂದ ಪುನರಾರಂಭಗೊಳ್ಳಬೇಕಿದ್ದ ಶಾಲೆಗಳು ನಾಳೆ ತೆರೆಯಲಿವೆ.

ಎಸ್ .ಎಸ್. ಎಲ್ .ಸಿ ಪೂರಕ ಪರೀಕ್ಷೆ ಎಂದಿನಂತೆ ನಡೆಯಲಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News