×
Ad

ಹೈಕಮಾಂಡ್ ಸೂಚನೆ: ನಾಯಕತ್ವ ಬಿಕ್ಕಟ್ಟಿನ ನಡುವೆ ಸಿಎಂ–ಡಿಸಿಎಂ ಉಪಹಾರ ಭೇಟಿ

Update: 2025-11-29 10:22 IST

ಬೆಂಗಳೂರು, ನ.29: ನಾಯಕತ್ವ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಹೈಕಮಾಂಡ್‌ ಸೂಚನೆಯಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಉಪಹಾರ ನೆಪದಲ್ಲಿ ಕೊನೆಗೂ ಪರಸ್ಪರ ಭೇಟಿ ಮಾಡಿದ್ದಾರೆ.

ಖುದ್ದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಉಪಹಾರಕ್ಕೆ ಆಹ್ವಾನಿಸಿದ ಹಿನ್ನೆಲೆಯಲ್ಲಿ ಸಿಎಂ ನಿವಾಸ ಕಾವೇರಿಯಲ್ಲಿ ಉಭಯ ನಾಯಕರು ಭೇಟಿಯಾದರು.

'ಪಕ್ಷದ ವರಿಷ್ಠರು ನನಗೆ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೂ ಕರೆ ಮಾಡಿ ನೀವಿಬ್ಬರೂ ಭೇಟಿ ಮಾಡಿ ಎಂದು ತಿಳಿಸಿದ್ದಾರೆ. ಹಾಗಾಗಿ ಅವರನ್ನು ನಾನು ಉಪಹಾರಕ್ಕಾಗಿ ಕರೆದಿದ್ದು, ಅಲ್ಲಿ ಚರ್ಚೆ ಮಾಡುತ್ತೇವೆ. ಡಿ.ಕೆ ಶಿವಕುಮಾರ್ ಅವರು ಹೈಕಮಾಂಡ್ ಹೇಳಿದ್ದನ್ನು ಒಪ್ಪುದಾಗಿ ಹೇಳಿದ್ದಾರೆ' ಎಂದು ಸಿಎಂ ತಿಳಿಸಿದ್ದರು.

 

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News