×
Ad

ಮೆಟ್ರಿಕ್-ಪೂರ್ವ ಉಚಿತ ಹಾಸ್ಟೆಲ್ ಪ್ರವೇಶಾತಿಗೆ ಅರ್ಜಿ ಆಹ್ವಾನ

Update: 2026-05-19 17:01 IST

Photo Credit : swdhmis.karnataka.gov.in

2026-27 ನೇ ಶೈಕ್ಷಣಿಕ ಸಾಲಿಗೆ ಡಾ. ಬಿ.ಆರ್. ಅಂಬೇಡ್ಕರ್ ‘ಮೆಟ್ರಿಕ್-ಪೂರ್ವ’ ಬಾಲಕ ಮತ್ತು ಬಾಲಕಿಯರ ವಸತಿ ನಿಲಯಗಳಿಗೆ ಸಮಾಜ ಕಲ್ಯಾಣ ಇಲಾಖೆಯು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.

ಗ್ರಾಮೀಣ ಭಾಗದ ಹಾಗೂ ಹಿಂದುಳಿದ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಸರ್ಕಾರ ಉಚಿತ ಹಾಸ್ಟೆಲ್ ಪ್ರವೇಶ ಪ್ರಕ್ರಿಯೆ ಆರಂಭಿಸಿದೆ. ದೂರದ ಊರುಗಳಿಗೆ ತೆರಳಿ ಓದುತ್ತಿರುವ ಬಡ ವಿದ್ಯಾರ್ಥಿಗಳಿಗೆ ಉಚಿತ ಊಟ ಮತ್ತು ವಸತಿ ಕಲ್ಪಿಸುವುದು ಯೋಜನೆಯ ಮುಖ್ಯ ಉದ್ದೇಶವಾಗಿದೆ.

2026-27 ನೇ ಶೈಕ್ಷಣಿಕ ಸಾಲಿಗೆ ಡಾ. ಬಿ.ಆರ್. ಅಂಬೇಡ್ಕರ್ ‘ಮೆಟ್ರಿಕ್-ಪೂರ್ವ’ ಬಾಲಕ ಮತ್ತು ಬಾಲಕಿಯರ ವಸತಿ ನಿಲಯಗಳಿಗೆ ಸಮಾಜ ಕಲ್ಯಾಣ ಇಲಾಖೆಯು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಆಸಕ್ತರು ಈ ಕೆಳಗಿನ ಲಿಂಕ್‌ನಲ್ಲಿ ಮೆಟ್ರಿಕ್-ಪೂರ್ವ ಉಚಿತ ಹಾಸ್ಟೆಲ್‌ಗೆ ಅರ್ಜಿ ಸಲ್ಲಿಸಬಹುದು: https://swdhmis.karnataka.gov.in/

📌 ಯಾರು ಅರ್ಜಿ ಸಲ್ಲಿಸಬಹುದು?

* 5ನೇ ತರಗತಿಯಿಂದ 10ನೇ ತರಗತಿವರೆಗೆ ಓದುತ್ತಿರುವ ವಿದ್ಯಾರ್ಥಿಗಳು (ಸರ್ಕಾರಿ, ಅನುದಾನಿತ ಅಥವಾ ಮಾನ್ಯತೆ ಪಡೆದ ಖಾಸಗಿ ಶಾಲೆಗಳ ವಿದ್ಯಾರ್ಥಿಗಳು).

* ಈ ವಸತಿ ನಿಲಯಗಳು ಪ್ರಮುಖವಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ಮೀಸಲಾಗಿದ್ದು, ಅವರು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

📌 ಅಗತ್ಯ ಪ್ರಮುಖ ದಾಖಲೆಗಳು

* ಸ್ಯಾಟ್ಸ್ ಐಡಿ: ವಿದ್ಯಾರ್ಥಿಯ ಶಾಲಾ ದಾಖಲಾತಿ ಸಂಖ್ಯೆ (ಶಾಲೆಯಲ್ಲಿ ಲಭ್ಯ).

* ಜಾತಿ ಮತ್ತು ಆದಾಯ ಪ್ರಮಾಣಪತ್ರ: ಇದು ವಿದ್ಯಾರ್ಥಿಯ ಹೆಸರಿನಲ್ಲೇ ಇರಬೇಕು. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವಾಗ ಇದರ ‘ಆರ್‌ಡಿ ಸಂಖ್ಯೆ’ ನಮೂದಿಸಬೇಕು.

* ಆಧಾರ್ ಕಾರ್ಡ್: ವಿದ್ಯಾರ್ಥಿಯ ಆಧಾರ್ ಮಾಹಿತಿ.

* ಮೊಬೈಲ್ ಸಂಖ್ಯೆ: ಪ್ರಸ್ತುತ ಬಳಕೆಯಲ್ಲಿರುವ ಮೊಬೈಲ್ ಸಂಖ್ಯೆ.

* ಫೋಟೋ: ವಿದ್ಯಾರ್ಥಿಯ ಇತ್ತೀಚಿನ ಪಾಸ್‌ಪೋರ್ಟ್ ಗಾತ್ರದ ಭಾವಚಿತ್ರ.

📌 ಆಧಾರ್ ಇ-ಕೆವೈಸಿ ಕಡ್ಡಾಯ

ಹಾಸ್ಟೆಲ್ ಪ್ರವೇಶಕ್ಕೆ ಸಮಾಜ ಕಲ್ಯಾಣ ಇಲಾಖೆ ಕಟ್ಟುನಿಟ್ಟಿನ ನಿಯಮ ಜಾರಿಗೆ ತಂದಿದೆ. ಅರ್ಜಿ ಸಲ್ಲಿಸುವ ವಿದ್ಯಾರ್ಥಿಯ ಆಧಾರ್ ಕಾರ್ಡ್‌ಗೆ ಇ-ಕೆವೈಸಿ ಆಗಿರುವುದು ಕಡ್ಡಾಯ. ಅಂದರೆ, ಆಧಾರ್ ಕೇಂದ್ರಕ್ಕೆ ತೆರಳಿ ವಿದ್ಯಾರ್ಥಿಯ ಬೆರಳಚ್ಚು (ಬಯೋಮೆಟ್ರಿಕ್) ಹಾಗೂ ಮೊಬೈಲ್ ಸಂಖ್ಯೆಯನ್ನು ನವೀಕರಿಸಬೇಕು. ಇದು ಆಗದಿದ್ದರೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಸಾಧ್ಯವಾಗುವುದಿಲ್ಲ.

📌 ಅರ್ಜಿ ಸಲ್ಲಿಸುವುದು ಹೇಗೆ?

ಅರ್ಹ ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ, ಅಲ್ಲಿ ‘ಪ್ರಿ-ಮೆಟ್ರಿಕ್’ ವಿಭಾಗವನ್ನು ಆಯ್ಕೆ ಮಾಡಿಕೊಂಡು ಆನ್‌ಲೈನ್ ಮೂಲಕ ಅರ್ಜಿಯನ್ನು ಭರ್ತಿ ಮಾಡಬಹುದು.

📌 ಸಹಾಯವಾಣಿ

ಅರ್ಜಿ ಸಲ್ಲಿಸುವಾಗ ಯಾವುದೇ ತೊಂದರೆ ಉಂಟಾದರೆ ಅಥವಾ ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಸಹಾಯವಾಣಿ ಸಂಖ್ಯೆ 9482300400 ಅನ್ನು ಸಂಪರ್ಕಿಸಬಹುದು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News