ರಾಜ್ಯದ ಅಲ್ಪಸಂಖ್ಯಾತ ಸಮುದಾಯದ ಯುವಕ-ಯುವತಿಯರಿಗೆ ಉಚಿತ UPSC ತರಬೇತಿಗೆ ಅರ್ಜಿ ಆಹ್ವಾನ
ಸಾಂದರ್ಭಿಕ ಚಿತ್ರ
2025-26ನೇ ಸಾಲಿನ ‘ಯುಪಿಎಸ್ಸಿ ಪೂರ್ವಭಾವಿ ಪರೀಕ್ಷೆ’ ಬರೆಯಲು ಬಯಸುವ ಪ್ರತಿಭಾವಂತ ಅಭ್ಯರ್ಥಿಗಳಿಗೆ ನುರಿತ ಸಂಸ್ಥೆಯ ಮೂಲಕ ಪ್ರತಿಷ್ಠಿತ ಉಚಿತ ವಸತಿಯುಕ್ತ ತರಬೇತಿ ನೀಡಲು ಅಧಿಕೃತ ಅಧಿಸೂಚನೆಯನ್ನು ಸರ್ಕಾರ ಹೊರಡಿಸಿದೆ.
ಕೇಂದ್ರ ಲೋಕಸೇವಾ ಆಯೋಗದ (UPSC) ಪರೀಕ್ಷೆ ಬರೆಯಲು ಬಯಸುವ ರಾಜ್ಯದ ಅಲ್ಪಸಂಖ್ಯಾತ ಸಮುದಾಯದ ಯುವಕ-ಯುವತಿಯರಿಗೆ ರಾಜ್ಯ ಸರ್ಕಾರ ಉತ್ತಮ ಅವಕಾಶ ಕಲ್ಪಿಸಿದೆ. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ನಿರ್ದೇಶನಾಲಯದ ವತಿಯಿಂದ 2025-26ನೇ ಸಾಲಿನ ‘ಯುಪಿಎಸ್ಸಿ ಪೂರ್ವಭಾವಿ ಪರೀಕ್ಷೆ’ ಬರೆಯಲು ಬಯಸುವ ಪ್ರತಿಭಾವಂತ ಅಭ್ಯರ್ಥಿಗಳಿಗೆ ನುರಿತ ಸಂಸ್ಥೆಯ ಮೂಲಕ ಪ್ರತಿಷ್ಠಿತ ಉಚಿತ ವಸತಿಯುಕ್ತ ತರಬೇತಿ ನೀಡಲು ಅಧಿಕೃತ ಅಧಿಸೂಚನೆ ಹೊರಡಿಸಿದೆ. ಆಸಕ್ತರು ಆನ್ಲೈನ್ ಮೂಲಕ ಈ ಕೆಳಗಿನ ಲಿಂಕ್ ಬಳಸಿ ಅರ್ಜಿ ಸಲ್ಲಿಸಬಹುದಾಗಿದೆ: https://docs.google.com/forms/d/e/1FAIpQLScCKNk8qK9sXOUgM8XDAoBcN51vR-SZ6HaBKgtn7pZklcJMiQ/viewform
📌 ಪ್ರಮುಖ ದಿನಾಂಕಗಳು
ಈ ತರಬೇತಿ ಕಾರ್ಯಕ್ರಮಕ್ಕೆ ಅರ್ಜಿ ಸಲ್ಲಿಸಲು ಇಲಾಖೆಯು ಅತ್ಯಂತ ಕಡಿಮೆ ಕಾಲಾವಕಾಶ ನೀಡಿದ್ದು, ಅರ್ಜಿ ಸಲ್ಲಿಕೆ ಪ್ರಕ್ರಿಯೆ 2026 ಮಾರ್ಚ್ 04ರಿಂದಲೇ ಆರಂಭವಾಗಿದೆ:
* ಆನ್‌ಲೈನ್ ಅರ್ಜಿ ಸಲ್ಲಿಕೆ ಆರಂಭದ ದಿನಾಂಕ: 04-03-2026.
* ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 09-03-2026.
📌 ಏನಿದು ಉಚಿತ ತರಬೇತಿ ಯೋಜನೆ?
ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ದುಬಾರಿ ಶುಲ್ಕ ತೆತ್ತು ಕೋಚಿಂಗ್ ಪಡೆಯಲು ಸಾಧ್ಯವಾಗದ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗಾಗಿ ಸರ್ಕಾರವೇ ಈ ವ್ಯವಸ್ಥೆ ಮಾಡಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಬೆಂಗಳೂರಿನ ‘ಹಜ್ ಭವನ’ದಲ್ಲಿ ಸತತ 04 ತಿಂಗಳ ಕಾಲ ಉಚಿತ ಊಟ, ವಸತಿ ಸೌಲಭ್ಯದೊಂದಿಗೆ ಯುಪಿಎಸ್‌ಸಿ ಪೂರ್ವಭಾವಿ ಪರೀಕ್ಷೆಗೆ (Prelims) ಅತ್ಯುತ್ತಮ ಗುಣಮಟ್ಟದ ತರಬೇತಿ ನೀಡಲಾಗುತ್ತದೆ.
📌 UPSC ಉಚಿತ ತರಬೇತಿ 2026 ಅರ್ಹತೆಗಳು:
ಈ ಉಚಿತ ತರಬೇತಿ ಪಡೆಯಲು ಅಭ್ಯರ್ಥಿಗಳು ಈ ಕೆಳಗಿನ ಮಾನದಂಡಗಳನ್ನು ಕಡ್ಡಾಯವಾಗಿ ಪೂರೈಸಿರಬೇಕು:
* ಸಮುದಾಯ: ಅಭ್ಯರ್ಥಿಯು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು ಹಾಗೂ ಅಲ್ಪಸಂಖ್ಯಾತ ಸಮುದಾಯಕ್ಕೆ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ) ಸೇರಿರಬೇಕು.
* ವಯೋಮಿತಿ: ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಅನ್ವಯವಾಗುವಂತೆ ಅಭ್ಯರ್ಥಿಯ ವಯಸ್ಸು ಕನಿಷ್ಠ 21 ವರ್ಷ ಆಗಿರಬೇಕು ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.
* ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಯು ಈ ಹಿಂದಿನ ಅಧಿಸೂಚನೆಗಳಲ್ಲಿ UPSC ಅಥವಾ KAS ಪೂರ್ವಭಾವಿ ಪರೀಕ್ಷೆಯಲ್ಲಿ (Prelims Exam) ಉತ್ತೀರ್ಣರಾಗಿರಬೇಕು ಎಂಬ ವಿಶೇಷ ಷರತ್ತನ್ನು ಇಲಾಖೆ ವಿಧಿಸಿದೆ.
📌 UPSC ಉಚಿತ ತರಬೇತಿ 2026 ಅರ್ಜಿ ಸಲ್ಲಿಸುವುದು ಹೇಗೆ?
ಅರ್ಹ ಅಭ್ಯರ್ಥಿಗಳು ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧಿಕೃತ ಜಾಲತಾಣ https://dom.karnataka.gov.in/ ಇಲ್ಲಿಗೆ ಭೇಟಿ ನೀಡಿ, ಅಲ್ಲಿ ಲಭ್ಯವಿರುವ ಮಾರ್ಗಸೂಚಿಗಳನ್ವಯ ಆನ್‌ಲೈನ್ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು. ಹೆಚ್ಚಿನ ಮಾಹಿತಿ ಅಥವಾ ಗೊಂದಲಗಳಿದ್ದರೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ ಸಂಖ್ಯೆ 8277799990 ಗೆ ಕರೆ ಮಾಡಬಹುದು.